ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 27ಕ್ಕೆ

Published on

ಜೇವರ್ಗಿ: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.85ಕ್ಕಿಂತ ಅಧಿಕ ಅಂಕ ಪಡೆದ ಹಾಲುಮತ ಸಮಾಜದ ವಿದ್ಯಾರ್ಥಿಗಳಿಗೆ ಆ.27ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕಲಬುರಗಿಯ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಾಲುಮತ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಾಳಿಂಗರಾಯ ತಿಳಿಸಿದ್ದಾರೆ. ಅರ್ಹ ವಿದ್ಯಾರ್ಥಿಗಳು ಆ.25ರೊಳಗೆ ಹೆಸರು ನೊಂದಾಯಿಸಿ ಸೂಕ್ತ ದಾಖಲೆಗಳೂಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ತಾಲೂಕು ಅಧ್ಯಕ್ಷರ (94498 34000)ನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net