

ಬೀದರ್: ಕೇಂದ್ರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಅಧೀನದ ನೆಹರೂ ಯುವ ಕೇಂದ್ರದ ವತಿಯಿಂದ ಇಲ್ಲಿಯ ಬಿ.ವಿ. ಭೂಮರಡ್ಡಿ ಕಾಲೇಜಿನಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛ ಭಾರತ ಅಭಿಯಾನ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಜರುಗಿತು.
100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಪರಿಸರ ಹಾಗೂ ಸ್ವಚ್ಛ ಭಾರತ ಅಭಿಯಾನ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ನೆಹರೂ ಯುವ ಕೇಂದ್ರ ಹಾಗೂ ಸಂಸ್ಕøತಿ ರೂರಲ್ ಆ್ಯಂಡ್ ಅರ್ಬನ್ ಡೆವಲೆಪ್‍ಮೆಂಟ್ ಸೊಸೈಟಿ ಸಹಯೋಗದಲ್ಲಿ ಜಿಲ್ಲೆಯ ಶಾಲಾ, ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ನೆಹರೂ ಯುವ ಕೇಂದ್ರದ ಯೋಗ ಶಿಕ್ಷಕ ಶಿವಕುಮಾರ ರೆಡ್ಡಿ ತಿಳಿಸಿದರು.
ಪ್ರಾಚಾರ್ಯೆ ದೀಪಾ ರಾಗಾ, ಎನ್.ಎಸ್.ಎಸ್. ಘಟಕದ ಸಂತೋಷ ರಟಕಲೆ, ಉಪನ್ಯಾಸಕಿಯರಾದ ಶೋಭಾ ಸ್ವಾಮಿ, ಕವಿತಾ ಬೀಡೆ ಇದ್ದರು.