ವಿದ್ಯಾರ್ಥಿಗಳಿಗೆ ಶಿಸ್ತು, ಸಂಸ್ಕಾರ ಅವಶ್ಯ

JSS PU COLLEGE-CULTURAL- PHOTO
Published on

ಹೊಳೆನರಸೀಪುರ: ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಶಿಸ್ತು, ಸಂಸ್ಕಾರ ಕಲಿಸಲಾಗುತ್ತಿದೆ ಎಂದು ದೊಡ್ಡಕಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಶಿವಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.


ತಾಲೂಕಿನ ದೊಡ್ಡಕಾಡನೂರು ಗ್ರಾಮದ ಜೆಎಸ್‌ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ 2023-24ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾನು ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯಲ್ಲಿ ಓದಿದ ಫಲವಾಗಿ ಇಂದು ಒಳ್ಳೆಯ ಸಂಸ್ಕಾರ ಕಲಿತಿದ್ದೇನೆ. ಈ ಶಿಕ್ಷಣ ಸಂಸ್ಥೆಯಿಂದ ಅನೇಕ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ರೂಢಿಸಿಕೊಳ್ಳಬೇಕು. ಜತೆಗೆ ತಮ್ಮ ತಂದೆ-ತಾಯಿ, ಗುರುಹಿರಿಯರಿಗೆ ಗೌರವ ಕೊಡಬೇಕು. ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಚೌಡಯ್ಯಕಟ್ನವಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಅನೇಕ ಅಡೆತಡೆ ಬರುತ್ತವೆ. ಏನೇ ಬಂದರೂ ಗುರಿ ಮತ್ತು ಉದ್ದೇಶಗಳನ್ನು ಮರೆಯಬಾರದು ಎಂದು ಸಲಹೆ ನೀಡಿದರು.

ಇತಿಹಾಸ ಉಪನ್ಯಾಸಕ ಎಂ.ಸೋಮಣ್ಣ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಲಾವಿದ ಬೆಳಗೊಳದ ರಂಗಸ್ವಾಮಿ, ದೊಡ್ಡಕಾಡನೂರು ಬಿ.ಸಿ.ಎಂ ಹಾಸ್ಟಲ್ ನಿಲಯಪಾಲಕಿ ಸೋಮಮ್ಮ, ವಿ.ಎಸ್.ಮಾಲಿಪಾಟಿಲ್, ಎಚ್.ಇ.ನಾಗರಾಜು, ಎ.ಜೆ.ಮಹೇಶ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net