ವಿದ್ಯಾರ್ಥಿಗಳಿಗೆ ಸಂಸ್ಕಾರ ಬಹು ಮುಖ್ಯ

03Kush05
ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು . ಹಾಸನದ ಶ್ರೀ ಶಂಭುನಾಥ ಸ್ವಾಮೀಜಿ, ನಿವೃತ್ತ ಪ್ರಾಂಶುಪಾಲ ಪ್ರೊ. ಜಯಪ್ರಕಾಶ ಗೌಡ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಸೀನಪ್ಪ ಇದ್ದರು.
Published on

ಕುಶಾಲನಗರ: ವಿದ್ಯಾರ್ಥಿಗಳು ಉತ್ತಮ ಸಂಸ್ಕಾರಗಳೊಂದಿಗೆ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಬೇಕೆಂದು ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದ ಅವರು, ಸರ್ಕಾರಿ ಕಾಲೇಜಿನಲ್ಲಿ ಹಲವು ಮಕ್ಕಳು ಪ್ರತಿಭಾವಂತರಿರುತ್ತಾರೆ. ಅವರ ಪ್ರತಿಭೆಗಳಿಗೆ ಪೂರಕವಾದ ವಾತಾವರಣವನ್ನು ಒದಗಿಸಿಕೊಡಬೇಕು ಎಂದರು.

ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಬೇಕು. ಉನ್ನತ ಆದರ್ಶ ಇರಿಸಿಕೊಂಡು ಗುರಿ ಸಾಧಿಸಿ ದೇಶಸೇವೆ ಮಾಡಬೇಕು ಎಂದರು. ವ್ಯಾಸಂಗ ಮುಗಿದ ನಂತರ ಉದ್ಯೋಗ ದೊರಕಿ ವೇತನ ಪಡೆದರೆ ಸಾಲದು. ಹೆತ್ತವರನ್ನು ಗೌರವದಿಂದ ನೋಡಿಕೊಳ್ಳಬೇಕು. ಇದು ದೇವರ ಸೇವೆಗೆ ಸಮಾನ ಎಂದರು.

ನಂತರ ವಿದ್ಯಾರ್ಥಿಗಳೊಂದಿಗೆ ಸ್ವಾಮೀಜಿ ಸಂವಾದ ನಡೆಸಿದರು. ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ನಿವೃತ್ತ ಪ್ರಾಂಶುಪಾಲ ಪ್ರೊ. ಜಯಪ್ರಕಾಶ ಗೌಡ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಸೀನಪ್ಪ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net