ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲಿ

ವಲಯ ಮಟ್ಟದ ಕ್ರೀಡಾಕೂಟ
ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಆರಂಭವಾದ ಪ್ರೌಢಶಾಲಾ ವಲಯಮಟ್ಟದ ಕ್ರೀಡಾಕೂಟಕ್ಕೆ ಬಿಇಒ ಕೆ.ವಿ.ಸುರೇಶ್ ಚಾಲನೆ ನೀಡಿದರು. ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಲಕ್ಷ್ಮಣ್, ಪ್ರೇಮಕುಮಾರ್, ನಾಗರಾಜ್ ಶೆಟ್ಟಿ, ಲೀನಾ ಫರ್ನಾಂಡೀಸ್, ರೇಖಾ ಫರ್ನಾಂಡೀಸ್ ಇತರರು ಇದ್ದರು.
Published on

ಕುಶಾಲನಗರ: ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿರುವ ಕ್ರೀಡೆ ಜೀವನದ ಪ್ರಮುಖ ಭಾಗವಾಗಿದ್ದು, ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಸಲಹೆ ನೀಡಿದರು.
ತಾಲೂಕಿನ ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ಕುಶಾಲನಗರ ಪ್ರೌಢಶಾಲಾ ’ಬಿ’ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ರೀಡೆ ರಾಷ್ಟ್ರೀಯ ಭಾವೈಕ್ಯತೆ, ಸಾಮರಸ್ಯ ಬೆಳೆಸುವುದರೊಂದಿಗೆ ಶಿಸ್ತು ಮತ್ತು ಸಂಯಮ ರೂಢಿಸಿಕೊಳ್ಳಲು ನೆರವಾಗಲಿದೆ ಎಂದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್ ಮಾತನಾಡಿ, ಕ್ರೀಡಾಳುಗಳು ಸೋಲು-ಗೆಲವಿನ ಕಡೆಗೆ ಗಮನ ಕೊಡದೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮನೋಭಾವ ಬೆಳೆಸಬೇಕು. ಇದರಿಂದ ಭವಿಷ್ಯದಲ್ಲಿ ಬದುಕು ರೂಪಿಸಿಕೊಳ್ಳಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಅಂಜೆಲಾ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ವಿಜಯ ಕ್ಯಾಸ್ಟಲೋನೋ ಮಾತನಾಡಿ, ಮಕ್ಕಳು ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳುವುದರಿಂದ ಪರಸ್ಪರ ಪ್ರೀತಿ- ವಿಶ್ವಾಸ ಬೆಳೆಯುತ್ತದೆ ಎಂದರು.
ಇದಕ್ಕೂ ಮೊದಲು ಬಿಇಒ ಕೆ.ವಿ.ಸುರೇಶ್ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಮಕ್ಕಳ ಪಥ ಸಂಚಲನ ಆಕರ್ಷಣೀಯವಾಗಿತ್ತು. ನಂತರ ಮಕ್ಕಳಿಗೆ, ವಾಲಿಬಾಲ್, ಥ್ರೋಬಾಲ್, ಕಬಡ್ಡಿ, ಬ್ಯಾಡ್ಮಿಂಟನ್ ಇತರ ಪಂದ್ಯಾಟಗಳು ಜರುಗಿದವು.
ಕ್ರೀಡಾಕೂಟದ ಸಂಚಾಲಕ ಎ.ಎ.ಲಕ್ಷ್ಮಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಫಾತಿಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಫ್ರಿ ಡಿಸಿಲ್ವ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಎಲ್.ಸುಕುಮಾರಿ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಸಿಆರ್‌ಪಿ ಕೆ.ಶಾಂತಕುಮಾರ್, ಅಂಜೆಲಾ ಶಾಲೆಯ ಸಂಚಾಲಕಿ ಲೀನಾ ಫರ್ನಾಂಡೀಸ್, ಮುಖ್ಯಸ್ಥೆ ರೇಖಾ ಫರ್ನಾಂಡೀಸ್, ಶಿರಂಗಾಲ ಸರ್ಕಾರಿ ಪ್ರೌಢಶಾಲೆ ಮುಖ್ಯಸ್ಥ ಆರ್.ಡಿ.ಲೋಕೇಶ್, ಸ್ಥಳೀಯ ಸರ್ಕಾರಿ ಪಿಯೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ.ನಾಗರಾಜಶೆಟ್ಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net