ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ

20Kush05
Published on

ಕುಶಾಲನಗರ: ವಿದ್ಯಾರ್ಥಿಗಳು ಸೋಲು-ಗೆಲುವಿನ ಕಡೆಗೆ ಗಮನ ಕೊಡದೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಅಶೋಕ ಸಂ.ಆಲೂರ ಕರೆ ನೀಡಿದರು.


ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಆವರಣದಲ್ಲಿನ ವಿಜ್ಞಾನ ಸಂಕೀರ್ಣದಲ್ಲಿ ಒಳಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2022-2023ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆ ಜತೆಗೆ ಮಾನಸಿಕ ಆರೋಗ್ಯಕ್ಕಾಗಿ ಹೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ದೈಹಿಕವಾಗಿ ಆರೋಗ್ಯವಂತರಾಗಿದ್ದಾಗ ಅಧ್ಯಯನದ ಮೇಲೆ ಸುಲಭವಾಗಿ ಗಮನ ಹರಿಸಬಹುದು. ಆತ್ಮವಿಶ್ವಾಸ, ಮಾನಸಿಕ ಜಾಗರೂಕತೆಯನ್ನು ಹೆಚ್ಚಿಸಿಕೊಳ್ಳಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಕಿವಿಮಾತು ಹೇಳಿದರು.


ಕೊಡಗು ವಿಶ್ವವಿದ್ಯಾಲಯ ಕುಲಸಚಿವ (ಮೌಲ್ಯಮಾಪನ) ಡಾ.ಸೀನಪ್ಪ ಅವರು ಮತ್ತು ಪ್ರಭಾರ ನಿರ್ದೇಶಕ ಪ್ರೊ.ಕೆ.ಕೆ. ಧರ್ಮಪ್ಪ ಅವರು, ವಿವಿಧ ವಿಭಾಗದ ಉಪನ್ಯಾಸಕರು, ಆಡಳಿತ ಸಿಬ್ಬಂದಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಎಚ್.ಆರ್. ವಿಜಯ್ ಕ್ರೀಡಾಕೂಟ ಆಯೋಜಿಸಿದ್ದರು.

ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಆವರಣದಲ್ಲಿನ ವಿಜ್ಞಾನ ಸಂಕೀರ್ಣದಲ್ಲಿ ಒಳಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2022-2023ನೇ ವಾರ್ಷಿಕ ಕ್ರೀಡಾಕೂಟಕ್ಕೆ ಶಟಲ್ ಬ್ಯಾಡ್ಮಿಂಟನ್ ಆಡುವ ಮೂಲಕ ಪ್ರೊ.ಅಶೋಕ ಸಂ. ಆಲೂರ ಚಾಲನೆ ನೀಡಿದರು. ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net