ವಿದ್ಯಾರ್ಥಿಗಳು ದೇಶಭಕ್ತರ ಪುಸ್ತಕಗಳನ್ನು ಅಧ್ಯಯನ ಮಾಡಲಿ

6ark-3
ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಎ.ಮಂಜು, ಪಟೇಲ್ ರಾಜೇಗೌಡ, ಎಂ.ಆರ್.ಮಂಜುನಾಥ್, ರಂಗನಾಥ್ ಇತರರು ಇದ್ದರು.
Published on

ಅರಕಲೂಡು: ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಜತೆಗೆ ದೇಶಭಕ್ತರು, ಸಾಧಕರ ಪುಸ್ತಕಗಳನ್ನು ಅಧ್ಯಯನ ಮಾಡುವ ಮೂಲಕ ಜ್ಞಾನಾರ್ಜನೆ ವೃದ್ಧಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಎ.ಮಂಜು ಹೇಳಿದರು.


ತಾಲೂಕಿನ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಆಯೋಜಿಸಿದ್ದ ಸ್ವಾಗತ, ಪ್ರತಿಭಾ ಪುರಸ್ಕಾರ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿದ್ಯೆ ಕಲಿತರಷ್ಟೆ ಪರಿಪೂರ್ಣ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗದು, ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸುವಂಥ ಸಂಸ್ಕಾರವಂತರಾಗಬೇಕು ಎಂದು ಸಲಹೆ ನೀಡಿದರು.


ವಿದ್ಯಾರ್ಥಿಗಳ ದಾಖಲಾತಿಗೆ ಸಹಕರಿಸಿದ ಪಟೇಲ್ ರಾಜೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ರಂಗನಾಥ್, ಸದಸ್ಯ ಅಶೋಕ್ ಕೊಡಕಹಳ್ಳಿ ಅವರನ್ನು ಗೌರವಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.


ಸಿಡಿಸಿ ಉಪಾಧ್ಯಕ್ಷ ಎಂ.ಆರ್.ಮಂಜುನಾಥ್ ಪ್ರಾಂಶುಪಾಲೆ ಫರ್ಜಾನಾ ಅಂಜುಂ ಮತ್ತು ಸಿಡಿಸಿ ಸದಸ್ಯರಾದ ಗಣೇಶ್ ಶೆಟ್ಟಿ, ಲೋಕೇಶ್, ರಾಮೇಗೌಡ, ಮಹೇಶ್ ಅರಸ್, ಸಚ್ಚಿನ್ ರಾಮೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net