ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಲಿ

13blk1
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಐಐಟಿ ಸಾಧಕ ವಿದ್ಯಾರ್ಥಿಗಳೊಂದಿಗೆ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಶ್ರೀ ಗುರುಬಸವ ಪಟ್ಟದ್ದೇವರು, ಬಸವರಾಜ ಮೊಳಕೀರೆ ಇತರರಿದ್ದರು.
Published on

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಐಐಟಿ ಸಾಧಕ ವಿದ್ಯಾರ್ಥಿಗಳೊಂದಿಗೆ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಶ್ರೀ ಗುರುಬಸವ ಪಟ್ಟದ್ದೇವರು, ಬಸವರಾಜ ಮೊಳಕೀರೆ ಇತರರಿದ್ದರು.

-----------

ಭಾಲ್ಕಿ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗದ ಜೊತೆಗೆ ಶರೀರ, ಮನಸ್ಸು ಶುದ್ಧವಾಗಿರಿಸಿಕೊಂಡು ನೈತಿಕ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.

ತಾಲೂಕಿನ ಕರಡ್ಯಾಳನ ಚನ್ನಬಸವೇಶ್ವರ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ೨೦೨೪-೨೫ನೆಯ ಸಾಲಿನ ಐಐಟಿ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಪೂಜ್ಯರು, ಗಡಿಭಾಗದ ಗ್ರಾಮೀಣ ಪ್ರದೇಶದ ರೈತರು, ಕೂಲಿಕಾರ್ಮಿಕರು, ಬಡವರ, ಮಧ್ಯಮ ವರ್ಗದ ಮಕ್ಕಳು ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್​ನಂಥ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆದು ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿರುವುದು ಹೆಮ್ಮೆ ತರಿಸಿದೆ ಎಂದರು.

ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಕಲಿತ ಸಂಸ್ಕಾರ ಜೀವನದುದ್ದಕ್ಕೂ ಪಾಲಿಸಬೇಕು. ದುಶ್ಚಟ ದುರ್ಗುಣಗಳಿಂದ ದೂರ ಉಳಿದು ಉತ್ತಮ ಸಂಶೋಧಕ, ವಿಜ್ಞಾನಿಗಳಾಗಿ ರಾಷ್ಟçಕ್ಕೆ ತಮ್ಮದೇ ಆದ ಕೊಡುಗೆ ನೀಡುವುದರ ಜೊತೆಗೆ ಸಮಾಜದಲ್ಲಿನ ಬಡವರು, ದುರ್ಬಲ ವರ್ಗದವರಿಗೆ ಕೈಲಾದಷ್ಟು ಸಹಾಯ ಮಾಡುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ನೇತೃತ್ವ ವಹಿಸಿದ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಗಡಿಭಾಗದ ಮಕ್ಕಳು ಶೈಕ್ಷಣಿಕವಾಗಿ ರಾಷ್ಟç ಮಟ್ಟದಲ್ಲಿ ಸಾಧನೆ ಮಾಡಬೇಕು ಎನ್ನುವುದು ಡಾ.ಬಸವಲಿಂಗ ಪಟ್ಟದ್ದೇವರ ಕನಸಾಗಿತ್ತು. ಅದರಂತೆ ನಮ್ಮ ಸಂಸ್ಥೆಯವೊಂದರಿಂದಲೇ ಪ್ರತಿವರ್ಷ ಹತ್ತಾರು ಮಕ್ಕಳು ಐಐಟಿ ಪ್ರವೇಶ ಪಡೆಯಲು ಅರ್ಹತೆ ಗಿಟ್ಟಿಸಿ ಕೊಳ್ಳುತ್ತಿರುವುದು ಸಂತಸ ತರಿಸಿದೆ ಎಂದು ತಿಳಿಸಿದರು.

ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕರಾದ ಸದಾ ವಿಜಯ, ಪುರುಷೋತ್ತಮ, ಶ್ರೀನಿವಾಸರಡ್ಡಿ, ಸಂಜಯ ತಿವಾರಿ, ರಾಘವೇಂದ್ರ ಪತ್ರಿ, ನಾಗೇಶ ಬಿರಾದಾರ್ ಇತರರಿದ್ದರು.

ಗುಣಾತ್ಮಕ ಶಿಕ್ಷಣ, ಸಂಸ್ಕಾರಕ್ಕೆ ಆದ್ಯತೆ ನೀಡುತ್ತಿರುವ ಪರಿಣಾಮ ಗುರುಕಲಯಿಂದ ಪ್ರತಿವರ್ಷ ನೂರಾರು ಮಕ್ಕಳು ಐಐಟಿ, ನೀಟ್, ಎನ್‌ಐಟಿ ಸೇರಿ ವಿವಿಧ ರಾಷ್ಟ್ರ ಮಟ್ಟದ ಪರೀಕ್ಷೆಗಳಲ್ಲಿ ಅರ್ಹತೆ ಗಳಿಸುತ್ತಿರುವುದು ಹೆಮ್ಮೆ ತರಿಸಿದೆ.

| ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು

ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರು

ಗ್ರಾಮೀಣ ಭಾಗದ ಮಕ್ಕಳು ಐಐಟಿಯಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆ. ಈ ವರ್ಷ ನಮ್ಮ ಸಂಸ್ಥೆಯಯಿಂದ ೪೬ ಮಕ್ಕಳು ಐಐಟಿ ಪ್ರವೇಶ ಪಡೆಯಲು ಅರ್ಹತೆ ಗಿಟ್ಟಿಸಿ ದೇಶವೇ ತಿರುಗಿ ನೋಡುವಂಥ ಸಾಧನೆ ಮಾಡಿದ್ದಾರೆ.

| ಶ್ರೀ ಗುರುಬಸವ ಪಟ್ಟದ್ದೇವರು

ಹಿರೇಮಠ ಸಂಸ್ಥಾನ ಭಾಲ್ಕಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net