ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Published on

ಕೊಳ್ಳೇಗಾಲ: ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಪಟ್ಟಣದ ಶ್ರೀ ರಾಜರಾಜೇಶ್ವರಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಎಸ್.ಪಿ ರತನ್ ಕುಮಾರ್ 200 ಮೀಟರ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಂತೆಯೇ, ಇತ್ತೀಚೆಗೆ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಲಿಖಿತ್ ನಾಯಕ್ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕರು ಅಭಿನಂ ದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net