ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ ಕಟ್ಟಿಕೊಳ್ಳಲಿ

04BTP02
Published on

ಬೆಟ್ಟದಪುರ: ವಿದ್ಯಾರ್ಥಿಗಳ ಜೀವನದಲ್ಲಿ ಕಾಲೇಜು ಶಿಕ್ಷಣ ಪ್ರಮುಖ ತಿರುವು ಆಗಿದೆ. ಇಂತಹ ಸಂದರ್ಭದಲ್ಲಿ ಸಮಯ ವ್ಯರ್ಥ ಮಾಡದೆ ಏಕಾಗ್ರತೆಯಿಂದ ಓದಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಿ ಎಂದು ರಾವಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಲಕ್ಷ್ಮೀಕಾಂತ್ ಹೇಳಿದರು.

ಬೆಟ್ಟದಪುರದ ಎಸ್‌ಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿದ ಎನ್‌ಎಸ್‌ಎಸ್ ಸಮಾರೋಪ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಹದಿಹರೆಯದ ವಯಸ್ಸಿನಲ್ಲಿ ವಿದ್ಯಾರ್ಥಿಗಳ ಮನಸ್ಸು ಚಂಚಲ ಮಾಡಿಕೊಳ್ಳಬಾರದು. ವಿದ್ಯೆ, ಕ್ರೀಡೆ ಸೇರಿದಂತೆ ಇನ್ನಿತರ ವೇದಿಕೆಗಳನ್ನು ಸದುಪಯೋಗ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಸಂಸ್ಥೆಯ ಆಡಳಿತಾಧಿಕಾರಿ ಬಿ.ವಿ.ಮಂಜುನಾಥ್, ಕಾರ್ಯದರ್ಶಿ ಎ.ವಿ ಛಾಯಾ, ಪ್ರಾಂಶುಪಾಲ ರಾಜು, ಮುಖ್ಯಶಿಕ್ಷಕರಾದ ಎಸ್.ಆರ್ ವೆಂಕಟೇಶ್, ಶಿಬಿರಾಧಿಕಾರಿ ಕುಬೇರ್, ಸಹಶಿಬಿರಾಧಿಕಾರಿ ಸತೀಶ್, ಉಪನ್ಯಾಸಕರಾದ ನವೀನ್ ಕುಮಾರ್, ಶಿವಕುಮಾರ್, ವಸಂತ್, ಸುನಿಲ್, ಯಶವಂತ್, ಬಸವರಾಜು, ಹರ್ಷಿತ, ಪ್ರತಾಪ್, ರಾಮೇಗೌಡ, ರಶ್ಮಿ, ಮಂಜುನಾಥ್, ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net