ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಾಸ ಮಾಡಿ

1507 Surapur 01
Published on

ಸುರಪುರ: ವಿದ್ಯಾರ್ಥಿಗಳು ಕಠಿಣ ಶ್ರಮವಹಿಸಿ ಅಭ್ಯಾಸ ಮಾಡುವ ಮೂಲಕ ತಾವು ಕಲಿತ ಕಾಲೇಜು ಮತ್ತು ಪಾಲಕರಿಗೆ ಕೀರ್ತಿ ತರಬೇಕು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ನಗರದ ಕಮಲ ಕಿಶೋರ ಗೋವರ್ಧನದಾಸ ಲಡ್ಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉನ್ನತೀಕರಿಸಿದ ಕಟ್ಟಡ ಮತ್ತು ಗ್ರಂಥಾಲಯದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗಿದ್ದು, ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.

ಎಸ್‌ಡಿಪಿ ಯೋಜನೆಯಡಿ ೨.೫೦ ಕೋಟಿ ರೂ. ವೆಚ್ಚದಲ್ಲಿ ಭವ್ಯ ಕಟ್ಟಡ ನಿರ್ಮಿಸಲಾಗಿದ್ದು, ವಿದ್ಯಾರ್ತಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದರು.

ಪ್ರಾAಶುಪಾಲ ಪ್ರೊ. ಬಲಭೀಮರಾಯ ದೇಸಾಯಿ, ನಗರಸಭೆ ಅಧ್ಯಕ್ಷೆ ಹೀನಾ ಕೌಸರ್ ಶಕೀಲ್ ಅಹ್ಮದ್, ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ (ತಾತಾ), ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಕಾಶ್ ಗುತ್ತೇದಾರ್, ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ನಗರಸಭೆ ಸದಸ್ಯರಾದ ಅಹ್ಮದ್ ಶರೀಫ್, ಜುಮ್ಮಣ್ಣ ಏಳುರೊಟ್ಟಿ, ಸುವರ್ಣಾ ಎಲಿಗಾರ, ನಾಸೀರ್ ಕುಂಡಾಲೆ, ಜಿಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ವಜ್ಜಲ್, ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ಬೀರಲಿಂಗ ಬಾದ್ಯಾಪುರ, ಸೂಗೂರೇಶ ವಾರದ, ಮುಖಂಡರಾದ ವೆಂಕಟೇಶ ಬೇಟೆಗಾರ, ದೊಡ್ಡ ದೇಸಾಯಿ ದೇವರಗೋನಾಲ, ವೆಂಕಟೇಶ ಹೊಸಮನಿ, ಅಬ್ದುಲ್ ಗಫಾರ್, ರವಿಚಂದ್ರ ಸಾಹುಕಾರ ಆಲ್ದಾಳ, ನಾರಾಯಣರಾವು ಸಿಂಗಾಡೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net