ವಿದ್ಯಾರ್ಥಿಗಳು ಸತತ ಶ್ರಮವಹಿಸಿ

23 YERRISWAMY 03
Published on

ಬಳ್ಳಾರಿ : ವಿದ್ಯಾರ್ಥಿಗಳು ಸತತ ಶ್ರಮವಹಿಸಿ, ಆಭ್ಯಾಸ ಮಾಡಿದರೆ ಯಾವುದು ಅಸಾಧ್ಯವಲ್ಲ ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಹೇಳಿದರು.
ನಗರದ ಮುನ್ಸಿಪಲ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಸಹಯೋಗದೊಂದಿಗೆ ಸಮೃದ್ಧಿ ಯೋಜನೆಯಡಿಯಲ್ಲಿ ಪ್ರಸ್ತಕ ಸಾಲಿನ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಸೋಮವಾರ ನಡೆದ ಸಿಇಟಿ, ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೊಂದು ಸುವರ್ಣ ಈ ಅವಕಾಶವಾಗಿದ್ದು, ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಜೀವನದ ಮೊದಲ 24 ವರ್ಷಗಳನ್ನು ಸರಿಯಾದ ರೀತಿಯಲ್ಲಿ ನಡೆದರೆ ಮುಂದಿನ ನಿಮ್ಮ ಜೀವನ ಉತ್ತಮವಾಗಿರುತ್ತದೆ. ಹೆಚ್ಚು ಹೆಚ್ಚು ಮಕ್ಕಳು ಸಿಇಟಿ, ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಮಾಜಕ್ಕೆ ವಿದ್ಯಾರ್ಥಿಗಳು ದಾರಿ ದೀಪವಾಗಬೇಕು ಎಂದು ಕಿವಿ ಮಾತು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net