ವಿದ್ಯಾರ್ಥಿಗಳು ಸಾಧನೆ ಮಾಡಿ

Published on

ಚಾಮರಾಜನಗರ: ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡುವ ಗುರಿಯನ್ನು ತಲುಪಲು ಮನೋರಂಜನಾ ಸಾಧನಗಳಿಂದ ದೂರವಿರಬೇಕು ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಬಿ.ನಿರಂಜನಮೂರ್ತಿ ಹೇಳಿದರು.

ನಗರದ ಜೆಎಸ್‌ಎಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ 2025-26 ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಸ್ತುಬದ್ಧವಾದ ಓದು ಭವಿಷ್ಯವನ್ನೇ ಬದಲಾವಣೆ ಮಾಡುತ್ತದೆ. ಇದಕ್ಕಾಗಿ ವೇಳಾಪಟ್ಟಿಯನ್ನು ತಯಾರು ಮಾಡಿಕೊಳ್ಳಿ. ಅಂದಿನ ಪಾಠವನ್ನು ಅಂದೇ ಓದಿ. ಶಿಕ್ಷಕರ ಮಾರ್ಗದರ್ಶನವನ್ನು ಪರಿಣಾಮಕಾರಿಯಾಗಿ ಬಳಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಮುಖ್ಯ ಶಿಕ್ಷಕಿ ಎನ್.ಜಿ.ನಾಗೇಶ್ವರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರತರಲು ವಿದ್ಯಾರ್ಥಿ ಸಂಘಟನೆಗಳು ಪ್ರಮುಖ ಪಾತ್ರ ವಹಿಸಲಿವೆ ಎಂದರು. ಇದೇ ವೇಳೆ ಶಾಲಾ ಸಂಸತ್ತಿನ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾವಿಧಿ ಭೋದಿಸುವ ಮೂಲಕ ಬ್ಯಾಡ್ಜ್ ವಿತರಿಸಲಾಯಿತು. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನಅಂಕಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರತಿಭಾಪುರಸ್ಕಾರ ವಿತರಿಸಲಾಯಿತು.

ಜೆಎಸ್‌ಎಸ್ ಶಿಕ್ಷಣಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಜೆಎಸ್‌ಎಸ್ ಬಾಲಕರ ಪ್ರೌಢಶಾಲಾ ಮುಖ್ಯಶಿಕ್ಷಕ ಸಿದ್ದಪ್ಪ, ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿನಿಯರಾದ ದಿವ್ಯಾಶ್ರೀ, ಯೋಗೇಶ್ವರಿ, ಸಹಶಿಕ್ಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net