ವಿದ್ಯಾರ್ಥಿಗಳು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಿ

ಫೋಟೋ ಶೀರ್ಷಿಕೆ 28 ಸಿಆರ್_ಪಿ-3 ಎ
Published on

ಚನ್ನರಾಯಪಟ್ಟಣ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವಿದ್ಯಾರ್ಥಿಗಳಿಗೆ ಸಾಹಿತ್ಯದ ಅಭಿರುಚಿ ಬೆಳೆಸುವುದರ ಜತೆಗೆ ವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.


ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಬುಧವಾರ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡುತ್ತಿರುವುದು ಅಭಿನಂದನೀಯ ಕಾರ್ಯ ಎಂದರು.


ವಿದ್ಯಾರ್ಥಿಗಳು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳುವುದರ ಜತೆಗೆ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥಾಲಯ, ಹೋಬಳಿ ಕೇಂದ್ರಗಳಲ್ಲಿ ಡಿಜಿಟಲ್ ಗ್ರಂಥಾಲಯಗಳನ್ನು ತೆರೆಯಲಾಗಿದ್ದು ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜತೆಗೆ ಸಂಸ್ಕಾರ, ಶಿಸ್ತು ರೂಢಿಸಿಕೊಳ್ಳಬೇಕು. ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ಅಬ್ದುಲ್ ಕಲಾಂ ಅವರ ಕುರಿತ ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಹೇಳಿದರು.


ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಬೊಮ್ಮೇಗೌಡ, ತಾಲೂಕು ನೌಕರರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪರಿಸರ ಪ್ರೇಮಿ ಚ.ನಾ.ಅಶೋಕ್, ಹೊಳೆನರಸೀಪುರ ಕಸಾಪ ತಾಲೂಕು ಘಟಕದ ಅಧ್ಯಕ್ಷ ಪುಟ್ಟೇಗೌಡ, ಅನ್ಸರ್ ಬೇಗ್, ಯಶೋದಾ ಜೈನ್, ಸುಜಾತಾ, ಶಿವನಗೌಡ ಪಾಟೀಲ್, ಮಲ್ಲೇಗೌಡ, ಜಬಿವುಲ್ಲಾ ಬೇಗ್, ಧನಪಾಲ್, ಕಾಲೇಜಿನ ಪ್ರಾಂಶುಪಾಲ ಕೆ.ಟಿ.ರಾಮೇಗೌಡ, ಬಿಇಒ ಎಚ್.ಎನ್.ದೀಪಾ, ಬಿಆರ್‌ಸಿ ಕೆ.ಎನ್.ಅನಿಲ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಸಹ ಕಾರ್ಯದರ್ಶಿ ದೇವರಾಜೇಗೌಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net