ವಿದ್ಯಾರ್ಥಿಗಳು ಸಾಹಿತ್ಯ ಅಭಿರುಚಿ ಬೆಳೆಸಿಕೊಳ್ಳಿ

24SPT1
Published on

ಸೋಮವಾರಪೇಟೆ: ಕನ್ನಡ ಅಭಿಮಾನವನ್ನು ಹೆಚ್ಚಿಸಿಕೊಳ್ಳುವ ಹಾಗೂ ಗೌರವಿಸುವ ಭಾವನೆಯನ್ನು ಪ್ರತಿಯೊಬ್ಬರೂ ಬೆಳೆಸಿಕೊಂಡಾಗ ಮಾತ್ರ ಕನ್ನಡ ಭಾಷೆಯ ಬೆಳವಣಿಗೆ ಸಾಧ್ಯ ಎಂದು ಮಾಜಿ ಸಚಿವ ಬಿ.ಎ.ಜೀವಿಜಯ ಹೇಳಿದರು.


ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೊಡಗು ಜಿಲ್ಲಾ ಘಟಕದಿಂದ ಬುಧವಾರ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸುವುದರ ಮೂಲಕ ಭಾಷಾ ಬೆಳವಣಿಗೆಗೆ ಮುಂದಾಗಬೇಕು. ವಿದ್ಯಾರ್ಥಿಗಳಿದ್ದಾಗಲೇ ಕವನ, ಚುಟುಕು, ಕತೆ, ಕಾದಂಬರಿಗಳನ್ನು ಬರೆಯುವುದಕ್ಕೆ ಅಭ್ಯಾಸ ಮಾಡಿಕೊಳ್ಳಬೇಕು. ಕನ್ನಡ ಪತ್ರಿಕೆಗಳನ್ನು ಓದಬೇಕು ಎಂದು ಸಲಹೆ ನೀಡಿದರು.


ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಪರಿಷತ್ತಿನ ಸದಸ್ಯತ್ವ ಹೊಂದುವ ಮೂಲಕ ಕನ್ನಡದ ಬೆಳವಣಿಗೆಗೆ ಶ್ರಮಿಸಬೇಕು ಎಂದರು.


ತಾಲೂಕು ಘಟಕದ ಅಧ್ಯಕ್ಷ ಎಸ್.ಡಿ.ವಿಜೇತ್, ಪ್ರಾಧ್ಯಾಪಕ ಕಾವೇರಿ ಪ್ರಕಾಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಸಂತ ಜೋಸೆಫ್ ವಿದ್ಯಾಸಂಸ್ಥೆಯ ಸಂಚಾಲಕ ಫಾದರ್ ರಾಯಪ್ಪ, ಕಸಾಪ ಪದಾಧಿಕಾರಿಗಳು ಇದ್ದರು. ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ಸುಜಲಾದೇವಿ(ಶಿಕ್ಷಣ), ಪರಶಿವಮೂರ್ತಿ(ವೃತ್ತ ನಿರೀಕ್ಷಕ), ಡಾ.ಸತೀಶ್ (ಸರಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ), ನ.ಲ.ವಿಜಯ (ಕವಿ ಮತ್ತು ಬರಹಗಾರ), ಶಾಂತಳ್ಳಿಯ ಕೆ.ಕೆ.ಮುತ್ತಣ್ಣ (ಪ್ರಗತಿಪರ ಕೃಷಿಕ) ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net