ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಿಇಓ

09rajesh4
Published on

ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೋನಾ ರೋತ್ ಅವರು ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) ಶುಕ್ರವಾರ ಭೇಟಿ ನೀಡಿ ಅಲ್ಲಿನ ಶಿಕ್ಷಕರು ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗೆ ವಿವಿಧ ಕಲಿಕಾ ವಿಷಯಗಳ ಕುರಿತು ಸಂವಾದ ನಡೆಸಿದರು.

ತಾಲೂಕುಮಟ್ಟದ ಸಮಾಜ ವಿಜ್ಞಾನ ಪ್ರಶ್ನೆಪತ್ರಿಕೆ ರಚನಾ ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ಜಿಲ್ಲಾ ಪಂಚಾಯಿತಿ ಸಿಇಓ ಅವರು ಶಿಕ್ಷಕರ ಬೋಧನಾ ವಿಧಾನ ಹಾಗೂ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿದರು. ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ವಿವಿಧ ವಿಷಯಗಳಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪ್ರಶಂಸಿಸಿದರು. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿಯೂ ಉತ್ತಮ ಸಾಧನೆ ಮಾಡಲು ಪ್ರೇರೇಪಿಸಿದರು.

ಪಠ್ಯ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ವಿವಿಧ ಪ್ರಶ್ನೆಗಳನ್ನು ಕೇಳಿದರು. ಕಲಿಕಾ ಪ್ರಕ್ರಿಯೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ ಮಕ್ಕಳ ತೊಂದರೆಗಳ ಬಗ್ಗೆ ಮಕ್ಕಳನ್ನು ವಿಚಾರಿಸಿ ಮಾಹಿತಿ ಪಡೆದರು. ಮಕ್ಕಳಿಗೆ ವ್ಯಾಕರಣ, ಪತ್ರ ಬರೆಯುವ ಬಗೆ, ವ್ಯಾಸಂಗ ಪೇರಣಾರ್ಥಕ ಕ್ರಿಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲ ನಂಜುಂಡಸ್ವಾಮಿ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net