ವಿದ್ಯಾರ್ಥಿನಿಯರ ಬೃಹತ್ ಸಮಾವೇಶ ಡಿ.೧,೨ರಂದು

Bhimanagouda
Published on

ಕಲಬುರಗಿ: ಶಿಕ್ಷಣ ಕ್ಷೇತ್ರದ ಬೇಡಿಕೆಗಳನ್ನು ಈಡೇರಿಸಲು ಹಕ್ಕೊತ್ತಾಯಗಳನ್ನು ಮಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ)ನಿಂದ ನಗರದಲ್ಲಿ ಡಿ.೧, ೨ರಂದು ವಿದ್ಯಾರ್ಥಿನಿಯರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಎಫ್‌ಐ ಜಿಲ್ಲಾ ಸಂಚಾಲಕ ಭೀಮನಗೌಡ ತಿಳಿಸಿದರು.

ಡಿ.೧ರಂದು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ಮಾರ್ಗವಾಗಿ ಎಸ್.ಎಂ.ಪಂಡಿತ ರಂಗಮಂದಿರದವರೆಗೆ ಬೃಹತ್ ಮೆರವಣಿಗೆ ನಡೆಸಿ, ನಂತರ ರಂಗಮಂದಿರದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಎಸ್‌ಎಫ್‌ಐ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ದಿಪ್ಸಿತಾ ದತ್ತ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಿ.೨ರಂದು ನಗರದ ಕನ್ನಡ ಭವನದಲ್ಲಿ ಸಮಾವೇಶ ನಡೆಯಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಿಂದ ಸುಮಾರು ೨೦೦ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸಮಾವೇಶದ ಮೂಲಕ ಶಿಕ್ಷಣವನ್ನು ಲಿಂಗಸAವೇದನಾಶೀಲಗೊಳಿಸಬೇಕು, ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಬೇಕು, ಮುಟ್ಟಿನ, ಹೆರಿಗೆ ರಜೆ ನೀಡಬೇಕು, ಆಪ್ತ ಸಲಹಾ ಸಮಾಲೋಚನೆ ಆಯೋಜಿಸಬೇಕು, ವಿದ್ಯಾರ್ಥಿನಿಯರ ಹಾಸ್ಟೆಲ್ ಸಂಖ್ಯೆ ಹೆಚ್ಚಿಸಬೇಕು ಎಂಬುದು ಸೇರಿ ವಿವಿಧ ಹಕ್ಕೊತ್ತಾಯಗಳನ್ನು ಮಾಡಲಾಗುವುದು ಎಂದು ತಿಳಿಸಿದರು. ಪ್ರಮುಖರಾದ ಮೇಘಾ, ಸುಜಾತಾ, ವೃಂದಾ, ಶಿವಕುಮಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net