ವಿದ್ಯಾರ್ಥಿನಿಯರಿಗೆ ರ‍್ಯಾಂಕ್

22CHIKODIGRAMEEN1
Published on

ಚಿಕ್ಕೊಡಿ ಗ್ರಾಮೀಣ: ತಾಲೂಕಿನ ಯಕ್ಸಂಬಾದ ಜೊಲ್ಲೆ ಶಿಕ್ಷಣ ಸಂಸ್ಥೆಯ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಬಿಎಸ್‌ಡಬ್ಲ್ಯು ಹಾಗೂ ಎಂಎಸ್‌ಡಬ್ಲ್ಯು ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ರ‍್ಯಾಂಕ್ ಪಡೆದು ಕೀರ್ತಿ ತಂದಿದ್ದಾರೆ. ಎಂಎಸ್‌ಡಬ್ಲ್ಯು ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಜ್ಯೋತಿ ಕಾಂಬಳೆ ೧ನೇ ಸ್ಥಾನ, ಬಿಎಸ್‌ಡಬ್ಲ್ಯು ಪದವಿ ವಿಭಾಗದಲ್ಲಿ ಮಾಧುರಿ ಗಾವಡೆ ೭ನೇ ರ‍್ಯಾಂಕ್, ತನುಜಾ ಪಾಟೀಲ ೧೦ನೇ ರ‍್ಯಾಂಕ್ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಜೊಲ್ಲೆ ಗ್ರೂಪ್ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ, ಜೊಲ್ಲೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶಶಿಕಲಾ ಜೊಲ್ಲೆ, ಆಡಳಿತ ಮಂಡಳಿ, ಪ್ರಾಚಾರ್ಯರು, ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net