ವಿದ್ಯಾರ್ಥಿವೇತನ ಪರೀಕ್ಷೆಗೆ ಅರ್ಜಿ ಆಹ್ವಾನ

Application-1-1280x720
Published on

ಮೈಸೂರು: 2022-23ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನ ಪರೀಕ್ಷೆಗೆ ಆನ್‌ಲೈನ್ ಮೂಲಕ ಅ.25ರ ಒಳಗೆ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಕೆಎಸ್‌ಕ್ಯೂಎಎಸಿ ವತಿಯಿಂದ ಡಿಸೆಂಬರ್ 18ರಂದು ಪರೀಕ್ಷೆಯನ್ನು ನಡೆಸಲಾಗುವುದು.

ಆನ್‌ಲೈನ್ ಮೂಲಕ ಅರ್ಜಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ವೆಬ್‌ಸೈಟ್‌ನಲ್ಲಿ ಎನ್‌ಟಿಎಸ್‌ಇ ಹಾಗೂ ಎಂಎಂಎಸ್ ಲಾಗಿನ್‌ನಲ್ಲಿ ಲಭ್ಯವಿದ್ದು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಪ್ರಾಂಶುಪಾಲರು ತಮ್ಮ ಶಾಲಾ ವಿದ್ಯಾರ್ಥಿಗಳ ಅರ್ಜಿಯನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬಹುದು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net