ವಿದ್ಯಾವಿಕಾಸ ವಿದ್ಯಾಸಂಸ್ಥೆಗೆ ದ್ವಿತೀಯ ಸ್ಥಾನ

CTD--- VIDAYA VIKASA
Published on

ಚಿತ್ರದುರ್ಗ: ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಾಗಲೂರಿನಲ್ಲಿ ವೈಜ್ಞಾನಿಕ ಸಮ್ಮೇಳನದ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಚಿತ್ರದುರ್ಗ ವಿದ್ಯಾವಿಕಾಸ ವಿದ್ಯಾ ಸಂಸ್ಥೆಯ 9ನೇ ತರಗತಿ(ಐಸಿಎಸ್‌ಇ)ವಿದ್ಯಾರ್ಥಿಗಳಾದ ಟಿ. ಜಾಗೃತ್, ಎಸ್. ಹರ್ಷವರ್ಧನ್ ದ್ವಿತೀಯ ಬಹುಮಾನ ವಿಜೇತರಾಗಿದ್ದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಬಹು ಉಪಯೋಗಿ ಕೃಷಿ ಯಂತ್ರ ಮಾದರಿ ಪ್ರದರ್ಶಿಸಿದ್ದರು. 20 ಸಾವಿರ ರೂ.ನಗದು ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿ ಪತ್ರಗಳೊಂದಿಗೆ ವಿದ್ಯಾರ್ಥಿಗಳನ್ನು ಹಾಗೂ ಮಾದರಿ ತಯಾರಿಕೆಗೆ ಮಾರ್ಗದರ್ಶನ ನೀಡಿದ ವಿಜ್ಞಾನ ಶಿಕ್ಷಕಿ ಸಿಎಚ್‌ಎಂ ಆಶಾ ಅವರಿಗೆ ಪಾರಿತೋಷಕ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆ ಕಾರ್ಯದರ್ಶಿ ಬಿ. ವಿಜಯ್‌ಕುಮಾರ್, ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಎಂ. ಪೃಥ್ವೀಶ, ಪಿ.ಸಿ. ಸುನಿತಾ, ಐಸಿಎಸ್‌ಇ ಪ್ರಾಚಾರ್ಯ ಪಿ. ಬಸವರಾಜಯ್ಯ, ಐಸಿಎಸ್‌ಇ ಉಪಪ್ರಾಚಾರ್ಯ ಬಿ. ಅವಿನಾಶ್, ಮುಖ್ಯ ಶಿಕ್ಷಕ ಎನ್.ಜಿ. ತಿಪ್ಪೇಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net