

ಚಿತ್ರದುರ್ಗ:ನಗರದ ವಿದ್ಯಾವಿಕಾಸ ವಿದ್ಯಾಸಂಸ್ಥೆಗೆ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಬಂದಿದೆ. ಪ ರೀಕ್ಷೆಗೆ ಹಾಜರಾಗಿದ್ದ 151 ವಿದ್ಯಾರ್ಥಿಗಳ ಪೈಕಿ 80 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು ಅಂಕ, 68 ವಿದ್ಯಾರ್ಥಿಗಳು ಶೇ.60ಕ್ಕಿಂತ ಹೆಚ್ಚು ಹಾಗೂ ಮೂವರು ವಿದ್ಯಾರ್ಥಿಗಳು ಶೇ.50ಕ್ಕಿಂತ ಹೆಚ್ಚು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಸಿ.ಐ.ಅಭಯ್(620),ಕೆ.ಆರ್.ಅಭಿನವ್(616)ಹಾಗೂ ಎಂ.ಜಗನ್ನಾಥ(614)ಅಂಕಗಳನ್ನು ಗಳಿಸಿದ್ದಾರೆ. ಜಿಲ್ಲೆಗೆ ಪ್ರಥಮ ಸ್ಥಾನ ಪ ಡೆದಿರುವ ಅಭಯ್ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ.
ಏಳು ವಿದ್ಯಾರ್ಥಿಗಳು ಕನ್ನಡದಲ್ಲಿ(125),ಮೂವರು ವಿದ್ಯಾರ್ಥಿಗಳು ಇಂಗ್ಲಿಷ್‌ನಲ್ಲಿ(100)16 ವಿದ್ಯಾರ್ಥಿಗಳು ಹಿಂದಿಯಲ್ಲಿ(100), ಇಬ್ಬರು ವಿದ್ಯಾರ್ಥಿಗಳು ಗಣಿತದಲ್ಲಿ(100)ಹಾಗೂ ಒಬ್ಬ ವಿದ್ಯಾರ್ಥಿ ವಿಜ್ಞಾನದಲ್ಲಿ (100)ಹಾಗೂ ಸಮಾಜ ವಿಜ್ಞಾನದಲ್ಲಿ ಆರು ವಿದ್ಯಾ ರ್ಥಿಗಳು ನೂರು ಅಂಕ ಪಡೆದಿದ್ದಾರೆಂದು ಮುಖ್ಯಶಿಕ್ಷಕ ಎನ್.ಜಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.