ಚಾಮರಾಜನಗರ: ತಾಲೂಕಿನ ಸಂತೇಮರಹಳ್ಳಿ ಸಮೀಪದ ಕಾವುದವಾಡಿ ಗ್ರಾಮದ ಜಮೀನೊಂದರಲ್ಲಿ ಗುರುವಾರ ವಿದ್ಯುತ್ ಅವಘಡ ಸಂಭವಿಸಿ ಬೆಂಕಿ ಹೊತ್ತಿಕೊಂಡು ಕಬ್ಬು ಸುಟ್ಟು ಹೊಗಿದೆ.
ಗ್ರಾಮದ ರೈತ ಮಂಜುನಾಥ್ ಅವರಿಗೆ ಸೇರಿದ 2 ಎಕರೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು. ಜಮೀನಿನ ಮೇಲೆ ವಿದ್ಯುತ್ ತಂತಿ ಹಾದುಹೋಗಿತ್ತು. ಇದು ಕಬ್ಬಿಗೆ ತಗುಲಿ ಬಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.