

ಮಳವಳ್ಳಿ: ತಾಲೂಕಿನ ಕಿರುಗಾವಲು ಸಮೀಪದ ಮಿಕ್ಕೆರೆ ಕೆರೆ ಏರಿಯ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಎಂ.ಕಾಗೇಪುರ ಗ್ರಾಮದ ಕುಮಾರ (29) ಮೃತ. ಕಿರುಗಾವಲಿನಿಂದ ಮಂಗಳವಾರ ರಾತ್ರಿ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ. ಸ್ಥಳಕ್ಕೆ ಪಿಎಸ್‌ಐ ಸತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹವನ್ನು ಸ್ಥಳಾಂತರಿಸಲಾಯಿತು.
ಬುಧವಾರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ನೀಡಲಾಯಿತು. ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.