ವಿದ್ಯುತ್ ಗುತ್ತಿಗೆದಾರರ ಸಮಸ್ಯೆ ನಿವಾರಿಸಿ

03-08-Shiva-4
ವಿದ್ಯುತ್ ಗುತ್ತಿಗೆದಾರರ ಎದುರಿಸುತ್ತಿರುವ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ರಾಯಚೂರಿನ ಜೆಸ್ಕಾಂ ವಿಭಾಗೀಯ ಕಚೇರಿ ಮುಂದೆ ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಸಂಘದ ಅಧ್ಯಕ್ಷ ಅಲ್ಲಾಭಕ್ಷ, ಉಪಾಧ್ಯಕ್ಷರಾದ ಬಂದೇನವಾಬ್, ಚಂದ್ರಶೇಖರ, ಕಾರ್ಯದರ್ಶಿ ವೆಂಕಟೇಶ ಚಿಲಕದ್, ಪದಾಕಾರಿಗಳಾದ ಗಂಗಾಧರ, ಕೃಷ್ಣಮೂರ್ತಿ, ಶ್ರೀನಿವಾಸ, ಮಹೇಶ, ಶಿವಕುಮಾರ ಇದ್ದರು.
Published on

ರಾಯಚೂರು: ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗುತ್ತಿಗೆದಾರರ ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಬೇಕು. ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡೆ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಥಳೀಯ ಜೆಸ್ಕಾಂ ವಿಭಾಗೀಯ ಕಚೇರಿ ಮುಂದೆ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಮಹ್ಮದ್ ಆಸ್ೀಗೆ ಮನವಿ ಸಲ್ಲಿಸಿ, ಗುತ್ತಿಗೆದಾರರಿಗೆ ವಿದ್ಯುತ್ ಮೀಟರ್, ಪರಿವರ್ತಕ ವಿತರಿಸಲು ವಿಳಂಬ ಮಾಡುತ್ತಿರುವುದರಿಂದ ಗ್ರಾಹಕರು ಮತ್ತು ಗುತ್ತಿಗೆದಾರರ ನಡುವಿನ ಸಂಬಂಧ ಕೆಡುವಂತಾಗಿದೆ ಎಂದು ದೂರಿದರು.
ಗುತ್ತಿಗೆದಾರರು ಮನೆಗಳಿಗೆ ಹೊಸ ಸಂಪರ್ಕ, ಕೈಗಾರಿಕೆ, ರೈತರ ಪಂಪ್‌ಸೆಟ್‌ಗಳಿಗೆ ಪರಿವರ್ತಕ ಅಳವಡಿಕೆ ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡುತ್ತಿದ್ದಾರೆ. ಸಾಮಗ್ರಿಗಳ ಕೊರತೆ, ತೂಕದಲ್ಲಿ ಮೋಸ, ವಸತಿ ಬಡಾವಣೆಗಳಿಗೆ ಹಣ ಪಾವತಿಸಿದರೂ ಸಕಾಲ್ಕೆಕ ಪರಿವರ್ತಕ ನೀಡದೇ ವಿಳಂಬ ಮಾಡಲಾಗುತ್ತಿದೆ.
ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕೈಗೊಳ್ಳಲಾಗಿಲ್ಲ. ಕೂಡಲೇ ಗುತ್ತಿಗೆದಾರರಿಗೆ ಸಮಸ್ಯೆ ಎದುರಿಸುವಂತೆ ಮಾಡುತ್ತಿರುವ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡೆ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಅಲ್ಲಾಭಕ್ಷ, ಉಪಾಧ್ಯಕ್ಷರಾದ ಬಂದೇನವಾಬ್, ಚಂದ್ರಶೇಖರ, ಕಾರ್ಯದರ್ಶಿ ವೆಂಕಟೇಶ ಚಿಲಕದ್, ಪದಾಕಾರಿಗಳಾದ ಗಂಗಾಧರ, ಕೃಷ್ಣಮೂರ್ತಿ, ಶ್ರೀನಿವಾಸ, ಮಹೇಶ, ಶಿವಕುಮಾರ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net