ವಿದ್ಯುತ್ ತಂತಿ ತುಳಿದು ರೈತ ಸಾವು

Published on

ಮದ್ದೂರು: ವಿದ್ಯುತ್ ತಂತಿ ತಗುಲಿ ಮೃತಪಟ್ಟ ರೈತರೊಬ್ಬರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.


ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ಶಿವಲಿಂಗಯ್ಯ (45) ಎಂಬುವರು ಶುಕ್ರವಾರ ಗ್ರಾಮದಲ್ಲಿ ನೆಲಕ್ಕೆ ತುಂಡಾಗಿ ಬಿದ್ದಿದ್ದ ವಿದ್ಯುತ್ ಸಂಪರ್ಕದ ತಂತಿಯನ್ನು ತಿಳಿಯದೆ ತುಳಿದಿದ್ದಾರೆ. ವಿದ್ಯುತ್ ಪ್ರವಹಿಸಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೆಸ್ಕ್ ನಿರ್ಲಕ್ಷ್ಯದಿಂದ ಇಂತಹ ಅವಘಡ ಸಂಭವಿಸಿದೆ. ಲೋಪವೆಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸರ್ಕಾರ ಕೂಡಲೇ ಪರಿಹಾರ ಮಂಜೂರು ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮಂಡ್ಯ ಮಿಮ್ಸ್‌ಗೆ ನೇತ್ರದಾನ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net