

ಕೂಡ್ಲಿಗಿ: ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಮಂಗಳವಾರ ಸಂಜೆ ಉತ್ತಮ ಮಳೆ ಸುರಿಯಿತು.
ಬಿರುಗಾಳಿಯಿಂದಾಗಿ ಗೋವಿಂದಗಿರಿಯಲ್ಲಿ ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ ಎಂದು ಜೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಪಟ್ಟಣದ ಮದಕರಿ ವೃತ್ತ ಬಳಿ ಕಟ್ಟಡದ ಮೆಲೆ ಕಟ್ಟಿದ್ದ ಫ್ಲೆಕ್ಸ್ ಗಾಳಿಗೆ ಹಾರಿ ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ಇದರಿಂದ ಕೆಲ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು. ಜೆಸ್ಕಾಂ ಸಿಬ್ಬಂದಿ ಬಂದು ಫ್ಲೆಕ್ಸ್ ತೆರವುಗೊಳಿಸಿದರು.