ವಿದ್ಯುತ್ ತಂತಿ ಸ್ಪರ್ಶಿಸಿ ಲಾರಿಯಲ್ಲಿದ್ದ ಹುಲ್ಲು ಭಸ್ಮ

Aluru benki
ಆಲೂರು ತಾಲೂಕಿನ ಕರಿಗೌಡನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಭತ್ತದ ಹುಲ್ಲು ಹೊತ್ತಿ ಉರಿಯುತ್ತಿದ್ದಾಗ ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಿದರು.
Published on

ಆಲೂರು: ತಾಲೂಕಿನ ಕರಿಗೌಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಭತ್ತದ ಹುಲ್ಲು ಭಸ್ಮವಾಗಿದೆ.


ಗ್ರಾಮದಲ್ಲಿ ರೈತ ರಾಜೇಗೌಡ ಅವರಿಂದ ಭತ್ತದ ಹುಲ್ಲನ್ನು ಖರೀದಿಸಿ ಹೊರರಾಜ್ಯಕ್ಕೆ ಲಾರಿಯಲ್ಲಿ ಸಾಗಿಸುತ್ತಿದ್ದಾಗ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಲಾರಿಯಲ್ಲಿದ್ದ ಭತ್ತದ ಹುಲ್ಲು ಬೆಂಕಿಗೆ ಆಹುತಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net