ವಿದ್ಯುತ್ ತಗುಲಿ ದುರ್ಮರಣ

IMG-20230612-WA0068
Published on

ಶ್ರೀರಂಗಪಟ್ಟಣ: ಕೆಂಪೇಗೌಡನಕೊಪ್ಪಲು ಗ್ರಾಮದ ಮನೆಯಲ್ಲಿ ವಿದ್ಯುತ್ ತಗುಲಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಜೆ.ಕೆ.ಟಯರ್ ಉದ್ಯೋಗಿ ಮೃತಪಟ್ಟಿದ್ದಾರೆ.

ತಾಲೂಕಿನ ಕೆಂಪೇಗೌಡನಕೊಪ್ಪಲು ಗ್ರಾಮದ ಚೌಡೇಗೌಡರ ಪುತ್ರ ಸೋಮಶೇಖರ್(47) ಮೃತಪಟ್ಟವರು.

ಮನೆಯಲ್ಲಿ ಏನೋ ಹುಡುಕುತ್ತಿದ್ದಾಗ ವಿದ್ಯುತ್ ತಗುಲಿ ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ತಕ್ಷಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ವಾರಸುದಾರರಿಗೆ ನೀಡಲಾಯಿತು. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಗೆ ತಂದೆ, ತಾಯಿ, ಪತ್ನಿ ಹಾಗೂ ಒಬ್ಬ ಪುತ್ರ ಇದ್ದಾರೆ.

ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net