ವಿದ್ಯುತ್ ತಗುಲಿ ಯುವಕ ಸಾವು

20Bnk02 Vilas
Published on

ಬಂಕಾಪುರ: ಆಕಸ್ಮಿಕವಾಗಿ ವಿದ್ಯುತ್ ಹರಿದು ಯುವಕನೊಬ್ಬ ಮೃತಪಟ್ಟ ಘಟನೆ ಪಟ್ಟಣದ ಶಿಂಪಿಗಲ್ಲಿಯಲ್ಲಿ ಶುಕ್ರವಾರ ನಡೆದಿದೆ. ವಿಲಾಸ ನವಲೆ (27)ಮೃತ ಯುವಕ. ವಿದ್ಯುತ್ ಚಾಲಿತ ಯಂತ್ರದ ಮೂಲಕ ಮನೆಯಲ್ಲಿ ನೀರು ತುಂಬುವಾಗ ವಿದ್ಯುತ್ ಹರಿದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವಕನನ್ನು ಬಂಕಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್​ಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ. ಈ ಕುರಿತು ಬಂಕಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net