ಹಲಗೂರು: ವಿದ್ಯುತ್ ಕಂಬಕ್ಕೆ ಕಟ್ಟಿದ್ದ ಹಸುವಿಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ.
ದಡಮಹಳ್ಳಿ ಗ್ರಾಮದ ನಿವಾಸಿ ಪುಟ್ಟಸ್ವಾಮಿ ಅವರು ಹೈನುಗಾರಿಕೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಎಂದಿನಂತೆ ಮನೆ ಮುಂದಿರುವ ವಿದ್ಯುತ್ ಕಂಬಕ್ಕೆ ಶನಿವಾರ ತಮ್ಮ ಹಸುವನ್ನು ಕಟ್ಟಿದ್ದರು. ಮಳೆಯ ಕಾರಣದಿಂದಾಗಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದೆ.
ಘಟನಾ ಸ್ಥಳಕ್ಕೆ ಸೆಸ್ಕ್ ಜೆಇ ಮಧುಸೂದನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇಲಾಖೆಯಿಂದ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.