ವಿದ್ಯುತ್ ದರ ಏರಿಕೆ ಕೈಬಿಡುವಂತೆ ಕಾಂಗ್ರೆಸ್ ಒತ್ತಾಯ

DKshi
Published on

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸುವವರೆಗೂ ವಿದ್ಯುತ್ ದರ ಏರಿಕೆ ಕೈಬಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಕಳೆದ 9 ತಿಂಗಳಿನಿಂದಲೂ ಕರೊನಾ ಬಾಧಿಸುತ್ತಿದೆ. ಜನ ಸಾಮಾನ್ಯರ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ದುಡಿಯುವ ಕೈಗಳಿಗೆ ಕೆಲಸ ಇಲ್ಲ. ವ್ಯಾಪಾರ ಇಲ್ಲ, ಮಾರುಕಟ್ಟೆ, ಸಾಗಣೆ ಸೌಲಭ್ಯವಿಲ್ಲ, ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಲೆ ಸಿಕ್ಕಿಲ್ಲ. ಇಂತಹ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ಮೊದಲೇ ನರಳುತ್ತಿರುವವರ ಹೊಟ್ಟೆಯ ಮೇಲೆ ಬರೆ ಎಳೆದಾಂತಾಗಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net