ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಜೆಸ್ಕಾಂಗೆ ಮುತ್ತಿಗೆ

3010klb03
Published on

ಕಲಬುರಗಿ: ನೀರಾವರಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ೧೨ ತಾಸು ವಿದ್ಯುತ್ ನೀಡಬೇಕು, ಪಂಪ್‌ಸೆಟ್‌ಗಳಿಗೆ ರಾತ್ರಿ ವಿದ್ಯುತ್ ನೀಡಬಾರದು, ಹಗಲು ಲೋಡ್ ಶೆಡ್ಡಿಂಗ್ ಮಾಡಬಾರದು, ಪಂಪ್‌ಸೆಟ್ ಅಕ್ರಮ ಸಕ್ರಮ ಕೈ ಬಿಡಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ನಗರದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.

ನೂರಾರು ರೈತರು ನಗರದ ನೆಹರು ಗಂಜ್‌ನಿAದ ಜೆಸ್ಕಾಂ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜೆಸ್ಕಾಂ ಕಚೇರಿ ಎದುರು ಒಣಗಿದ ಬೆಳೆಯನ್ನು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ಕೊರತೆಯಿಂದ ಒಣಗಿದ ನೀರಾವರಿ ಬೆಳೆಗಳಿಗೆ ಪ್ರತಿ ಎಕರೆಗೆ ೧೦ ಸಾವಿರ ರೂ. ಪರಿಹಾರ ನೀಡಬೇಕು, ಪಂಪ್‌ಸೆಟ್‌ಗಳಿಗೆ ಮೀಟರ್ ಹಾಕುವುದು ತಡೆಯಬೇಕು, ಪಂಪ್‌ಸೆಟ್‌ಗಳು ಸುಟ್ಟರೆ ತಕ್ಷಣ ಹೊಸದು ಕೂಡಿಸಬೇಕು, ಪಂಪ್‌ಸೆಟ್ ಅಕ್ರಮ ಸಕ್ರಮ ಮಾಡಬೇಕು, ವಿದ್ಯುತ್ ಖಾಸಗೀಕರಣ ಮಾಡಬಾರದು ಎಂಬುದು ಸೇರಿ ವಿವಿಧ ಬೇಡಿಕೆಗಳ ಕುರಿತು ಮುಖ್ಯಮಂತ್ರಿ, ಇಂಧನ ಸಚಿವರಿಗೆ ಬರೆದ ಮನವಿ ಪತ್ರವನ್ನು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ನೀಡಿದರು.

ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಎಂ.ಬಿ.ಸAಜ್ಜನ್, ಪ್ರಮುಖರಾದ ನಾಗಯ್ಯ ಸ್ವಾಮಿ, ಪ್ರಭು ಪ್ಯಾರಾಬುದ್ಧಿ, ಪರಮೇಶ್ವರ ಕಾಂತಾ, ಮಲ್ಲಣ್ಣ ಮೇಳಕುಂದಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net