ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

 ಮಂಜುನಾಥ್(53)
ಮಂಜುನಾಥ್(53)
Published on

ಯಳಂದೂರು: ಪಟ್ಟಣದ ಕೆ.ಕೆ.ರಸ್ತೆಯಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ.

ಯರಿಯೂರು ಗ್ರಾಮದ ಮಂಜುನಾಥ್(53) (ಕೇಬಲ್ ಮಂಜು) ಮೃತ. ಕೇಬಲ್‌ನ್ನು 11 ಕೆವಿ ವಿದ್ಯುತ್ ವೈರ್ ಮೇಲಿಂದ ಎಳೆಯುತ್ತಿದ್ದ ವೇಳೆ ಕೇಬಲ್ ತುಂಡಾಗಿ ವಿದ್ಯುತ್ ಪ್ರವಹಿಸಿದ್ದು, ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಸೆಸ್ಕ್ ಎಇಇ ಲಿಂಗರಾಜು, ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಿದ್ದಾರೆ. ಇವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net