ವಿದ್ಯುತ್ ಶಾಕ್‌ನಿಂದ ರೈತ ಸಾವು

22 ckm 7 range gowda
ರೈತ ರಂಗೇಗೌಡ
Published on

ಚಿಕ್ಕಮಗಳೂರು: ದನ ಮೇಯಿಸಲು ಜಮೀನಿಗೆ ತೆರಳಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಈಶ್ವರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.

ರೈತ ರಂಗೇಗೌಡ (೬೮) ಸಾವನ್ನಪಿರುವ ದುರ್ದೈವಿ. ಸೋಮವಾರ ಸಂಜೆ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ತುಳಿದು ರಂಗೇಗೌಡ ಸಾವನ್ನಪ್ಪಿದ್ದಾರೆ. ಈ ಸಂಬAಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net