

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೇಕರಿ ಬೆಂಕಿಗಾಹುತಿ
ಚಿಕ್ಕೋಡಿ :
ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಬೇಕರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಹಾನಿಯಾದ ಘಟನೆ ಹುಕ್ಕೇರಿ ತಾಲೂಕಿನ ರಕ್ಷಿಕ್ರಾಸ್ ಬಳಿ ಭಾನುವಾರ ತಡ ರಾತ್ರಿ ನಡೆದಿದೆ.
ಪುಟ್ಟಸ್ವಾಮಿ ಎಂಬುವವರಿಗೆ ಸೇರಿದ ನ್ಯೂ ಬೆಂಗಳೂರು ಅಯ್ಯಂಗಾರ ಬೇಕರಿಗೆ ಬೆಂಕಿ ತಗುಲಿ ಅಂದಾಜು 10 ಲಕ್ಷ ರೂ ಮೌಲ್ಯದ ಸಾಮಾನು ಹಾನಿಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಬೇಕರಿ ಅಂಗಡಿಯಲ್ಲಿದ್ದ ವಿವಿಧ ತಿನಿಸುಗಳು, ಫರ್ನಿಚರ್, ಪ್ರೀಜ್ ಸೇರಿದಂತೆ ಎಲ್ಲಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಈ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ