

ಹರಪನಹಳ್ಳಿ: ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಪುಣಭಗಟ್ಟ ವಿದ್ಯುತ್ ಪ್ರಸರಣ ಕೇಂದ್ರದ ಬಳಿ ಸತ್ತೂರು ಹಾಗೂ ಕಂಚೀಕೆರೆ ರೈತರು ಪ್ರತಿಭಟನೆ ನಡೆಸಿದರು.
ಗ್ರಾಮದ ಕೃಷಿ ಜಮೀನುಗಳಿಗೆ ಕಳೆದ ಮೂರು ತಿಂಗಳಿಂದ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಇದರಿಂದ ಬೆಳೆಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲವೆಂದು ಆರೋಪಿಸಿದರು. ಸ್ಥಳಕ್ಕೆ ಆಗಮಿಸಿದ ಎಇಇ ಪಂಡಿತಾರಾಧ್ಯ, ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಎರಡರಿಂದ ಮೂರು ದಿನಗಳಲ್ಲಿ ಸಮಸ್ಯೆ ಸರಿಪಡಿಸುವ ಭರವಸೆ ನೀಡಿದರು.