

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಚಾಲ್ತಿಯಲ್ಲಿರುವ 220 ಕೆವಿ ಸ್ವೀಕರಣಾ ಕೇಂದ್ರ ಅಥಣಿ ಹಾಗೂ 110 ಕೆವಿ ವಿದ್ಯುತ್ ಕೇಂದ್ರ ಸತ್ತಿ ವಿದ್ಯುತ್ ಮಾರ್ಗದಿಂದ ಘಟನಟ್ಟಿ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲು ಉದ್ದೇಶಿಸಿರುವ 110/11 ಕೆವಿ ವಿದ್ಯುತ್ ಕೇಂದ್ರಕ್ಕೆ ಲೀಲೋ 0.186 ಕಿಮೀ ವಿದ್ಯುತ್ ಮಾರ್ಗವನ್ನು ನಿರ್ಮಿಸಲಾಗಿದೆ. 110 ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಥಣಿ ಹಾಗೂ ಅಕ್ಕಪಕ್ಕದ ಹಳ್ಳಿಗಳು ಮತ್ತು ಸುತ್ತಲಿನ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ. ಈ ವಿದ್ಯುತ್ ಪ್ರಸರಣ ಮಾರ್ಗವನ್ನು ಆಗಸ್ಟ್ 23,2023 ರಂದು ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್ತನ್ನು ಹರಿಬಿಡಲಾಗುವದರಿಂದ ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲಿ ಅಥವಾ ತಂತಿಗಳನ್ನು ಮುಟ್ಟುವುದಾಗಲಿ ಹಸಿರು ಟೊಂಗೆಗಳನ್ನು ಎಸೆಯುವುದಾಗಲಿ,ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಲಿ, ಗಿಡಮರಗಳನ್ನು ನೆಡುವುದಾಗಲಿ, ಮನೆ/ಗುಡಿಸಲುಗಳನ್ನು ನಿರ್ಮಿಸುವುದರಿಂದ ಪ್ರಾಣಾಪಾಯವಾಗುವುದು ಆದ್ದರಿಂದ ಸಾರ್ವಜನಿಕರು ಒಂದು ವೇಳೆ ಇಂತಹ ಕೃತ್ಯಗಳನ್ನು ಎಸಗಿದಲ್ಲಿ ಮುಂದೆ ಒದಗಬಹುದಾದ ಅಪಾಯಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ ಎಂದು ಕರ್ನಾಟಕ ವಿದ್ಯುತ್ ಪ್ರಸರಣ
ನಿಗಮ ನಿಯಮಿತ ಕಾರ್ಯನಿರ್ವಾಹಕ ಅಭಿಯಂತರು(ವಿ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.