

ಚಾಮರಾಜನಗ: ಶಿಥಿಲಾವಸ್ಥೆಯಲ್ಲಿರುವ ವಿದ್ಯುತ್ ಕಂಬವನ್ನು ತೆರೆವುಗೊಳಿಸುವಂತೆ ತಾಲೂಕಿನ ಪೊನ್ನಾಚಿ ಸಮೀಪದ ಮರೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹನೂರು ತಾಲೂಕಿನ ಗ್ರಾಮದ ಸರ್ಕಾರಿ ಹಿರಿಯ ಶಾಲೆಯ ಮುಂಭಾಗದಲ್ಲಿರುವ ವಿದ್ಯುತ್ ಕಂಬದಲ್ಲಿ 100 ಕೆ.ವಿ ವಿದ್ಯುತ್ ಸಾಮರ್ಥ್ಯದ ಟ್ರಾನ್ಸ್‌ಫಾರ್ಮರ್ ಅಳವಡಿಸಲಾಗಿದೆ. ಆದರೆ, ಈ ವಿದ್ಯುತ್ ಕಂಬ ಕಳೆದ 2 ವರ್ಷದಿಂದ ಶಿಥಿಲಗೊಂಡಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ಇದೇ ಮಾರ್ಗವಾಗಿ ಶಾಲಾ ವಿದ್ಯಾರ್ಥಿಗಳು ಓಡಾಡುತ್ತಿದ್ದಾರೆ. ಹಾಗಾಗಿ ಅಪಾಯ ಸಂಭವಿಸುವ ಮುನ್ನ ತೆರವುಗೊಳಿಸುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಹಾಗೂ ಸೆಸ್ಕ್ ಇಲಾಖೆಯ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಆದರೆ, ಯಾರೊಬ್ಬರು ಈ ಬಗ್ಗೆ ಕ್ರಮವಹಿಸಿಲ್ಲ.
ಆದ್ದರಿಂದ ಈ ಮಾರ್ಗದಲ್ಲಿ ಓಡಾಡುವವರು ಜೀವ ಭಯದಲ್ಲೇ ಓಡಾಡಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಇತ್ತ ಗಮನಹರಿಸಿ ವಿದ್ಯುತ್ ಕಂಬ ತೆರವುಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರ