

ಚಿತ್ರದುರ್ಗ:ನಿವೃತ್ತ ನೌಕರರು ತಮ್ಮ ಪಿಂಚಣಿ ಪಡೆಯುವುದನ್ನು ಮುಂದುವರಿಸಲು ಪ್ರತಿ ವರ್ಷ ನವೆಂಬರ್‌ನಲ್ಲಿ ಜೀವನ ಪ್ರಮಾಣ ಪತ್ರ ಸಲ್ಲಿಸಬೇಕಿದೆ. ಈ ನಿಟ್ಟಿನಲ್ಲಿ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸಹಯೋಗದಲ್ಲಿ ದೇಶ್ಯಾದ್ಯಂತ ವಿದ್ಯುನ್ಮಾನ ಜೀವನ ಪ್ರಮಾಣ ಪತ್ರ ಸಲ್ಲಿಕೆಗೆ ನವೆಂಬರ್ 1ರಿಂದ 30ವರೆಗೆ ಅಭಿಯಾನ ಹಮ್ಮಿ ಕೊಂಡಿ ದೆ. ನವೆಂಬರ್ 6,14,20,27 ಮತ್ತು 30ರಂದು ಜಿಲ್ಲೆಯ ಪ್ರಧಾನ ಅಂಚೆ ಕಚೇರಿ,ಎಲ್ಲ ತಾಲೂಕು ಅಂಚೆ ಕಚೇರಿಗಳಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪಿಂಚಣಿದಾರರು ಇದರ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅಂಚೆ ಅಧೀಕ್ಷಕಿ ಕೆ.ಆರ್.ಉಷಾ ಮನವಿ ಮಾಡಿದ್ದಾರೆ.
-