ವಿದ್ಯೆ ಜೊತೆಗೆ ಸಂಸ್ಕೃತಿ, ಸಂಪ್ರದಾಯವನ್ನು ಕಲಿಸಿ

22 ckm 1
ಚಿಕ್ಕಮಗಳೂರಿನ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಉದ್ಘಾಟಿಸಿದರು. ಶಾಂತಕುಮಾರಿ, ಎಂ.ಪಿ.ಉಡುಪ, ಎಸ್.ಆರ್.ಹೇಮಾ, ನವ್ಯ, ರಂಗನಾಥ್, ಲೀಲಾಧರ್ ಪಟೇಲ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ವಿದ್ಯಾಸಂಸ್ಥೆಗಳು ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾತ್ರ ಮಾಡಿದರೆ ಸಾಲದು. ಗುಣಮಟ್ಟದ ಶಿಕ್ಷಣದ ಜೊತೆಗೆ ಅವರಿಗೆ ನಮ್ಮ ಸಂಸ್ಕೃತಿ, ಸಂಪ್ರದಾಯ, ಸಂಸ್ಕಾರಗಳನ್ನೂ ಕಲಿಸಿ ಅವರನ್ನು ಸುಸಂಸ್ಕೃತರನ್ನಾಗಿಯೂ ಮಾಡಬೇಕು ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಸಲಹೆ ನೀಡಿದರು.

ನಗರದ ಸಂಜೀವಿನಿ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇವಾಲಯಗಳು ಸಂಸ್ಕೃತಿಯ ಕೇಂದ್ರಗಳು. ವಿದ್ಯಾಸಂಸ್ಥೆಗಳು ಸಂಸ್ಕಾರದ ಕೇಂದ್ರಗಳು. ಮಕ್ಕಳು, ಯುವಜನತೆ ಸಂಸ್ಕಾರವAತರಾದರೆ ಮಾತ್ರ ಸಂಸ್ಕೃತಿಯೊAದಿಗೆ ವಿಕೃತಿ ಇಲ್ಲದೆ ಪ್ರಕೃತಿಯೊಂದಿಗೆ ಬದುಕಲು ಸಾಧ್ಯವಾಗುತ್ತದೆ. ನಮ್ಮ ಮಕ್ಕಳು ವಿದ್ಯಾವಂತರು, ಸಂಸ್ಕಾರವAತರೂ ಆದರೆ ಮಾತ್ರ ಸಮಾಜ, ಈ ನಾಡು, ದೇಶ ಸುಸಂಸ್ಕೃತವಾಗುತ್ತದೆ. ರಾಷ್ಟçದ ಭವಿಷ್ಯ ಉಜ್ವಲವಾಗುತ್ತದೆ ಎಂದು ಕಿವಿಮಾತು ಹೇಳಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಕಲಿಕೆ ಅನಿವಾರ್ಯ. ಆ ನಿಟ್ಟಿನಲ್ಲಿ ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಇಂಗ್ಲಿಷ್ ಕಲಿಸಬೇಕು. ಆದರೆ ಅದರ ಜೊತೆ ಜೊತೆಗೆ ಮಾತೃಭಾಷೆಯನ್ನೂ ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಆಧುನಿಕತೆಯ ಭರದಲ್ಲಿ ಮಾತೃಭಾಷೆ ಕಳೆದು ಹೋದರೆ ನಾವು ನಮ್ಮ ಸ್ವಾಭಿಮಾನ, ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯ ಸೇರಿದಂತೆ ಎಲ್ಲವನ್ನೂ ಕಳೆದುಕೊಂಡು ಜಗತ್ತಿನೆದುರು ಅನಾಥರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮಕ್ಕಳು ಮತ್ತು ಯುವಜನತೆ ಓದುವುದು ,ಬರೆಯುವುದು, ಮಾತನಾಡುವುದು ಸೇರಿದಂತೆ ದೈನಂದಿನ ಎಲ್ಲಾ ವ್ಯವಹಾರಗಳಲ್ಲೂ ಮಾತೃಭಾಷೆಯನ್ನು ಬಳಸಿದರೆ ಮಾತ್ರ ನಮ್ಮ ಭಾಷೆ, ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯಗಳು ಉಳಿಯುತ್ತವೆ ಎಂದು ತಿಳಿ ಹೇಳಿದರು.

ಈ ವೇಳೆ ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ತಮ್ಮ ಪ್ರಾಸಬದ್ಧ ಮಾತು ಮತ್ತು ನವಿರು ಹಾಸ್ಯದೊಂದಿಗೆ ವಿದ್ಯಾರ್ಥಿಗಳು ಮತ್ತು ಪಾಲಕರನ್ನು ನಗೆಗಡಲಲ್ಲಿ ತೇಲಿಸುವುದರ ಜೊತೆಗೆ ಅವರನ್ನು ಗಂಭೀರ ಚಿಂತನೆಗೂ ಹಚ್ಚಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಜೀವಿನಿ ವಿದ್ಯಾಸಂಸ್ಥೆಯ ಅಧ್ಯಕ್ಷೆ ಎಸ್.ಶಾಂತಕುಮಾರಿ, ಸ್ಥಳೀಯ ಮಕ್ಕಳನ್ನು ವಿದ್ಯಾವಂತರನ್ನಾಗಿ, ಸುಸಂಸ್ಕೃತರನ್ನಾಗಿ ಮಾಡುವ ಉz್ದೆÃಶದಿಂದ ಈ ಸಂಸ್ಥೆಯನ್ನು ಕಟ್ಟಿ ಬೆಳೆಸಲಾಗಿದೆ. ಪೇಜಾವರ ಮಠ ಶಾಲೆ ಅಭಿವೃದ್ಧಿಗೆ ಆರ್ಥಿಕ ಸಹಾಯ ಸೇರಿದಂತೆ ಎಲ್ಲ ರೀತಿಯ ನೆರವನ್ನೂ ನೀಡುತ್ತಿದೆ ಎಂದು ತಿಳಿಸಿದರು.

ಸಂಜೀವಿನಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ ಅವರಲ್ಲಿ ಸಂಸ್ಕೃತಿ, ಸಂಸ್ಕಾರವನ್ನು ತುಂಬುವ ಕೆಲಸವನ್ನೂ ಮಾಡುತ್ತಿದೆ. ಮಕ್ಕಳನ್ನು ಉತ್ತಮ ನಾಗರೀಕರನ್ನಾಗಿ ರೂಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ಹೇಳಿದರು.

ಸಂಜೀವಿನಿ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಂ.ಪಿ.ಉಡುಪ, ಸಹಕಾರ್ಯದರ್ಶಿ ಡಾ.ಮೋಹನ್, ಆಡಳಿತ ಮಂಡಳಿ ಸದಸ್ಯರಾದ ರಂಗನಾಥ್, ಲೀಲಾದರ್ ಪಟೇಲ್, ಪ್ರಾಚಾರ್ಯೆ ಎಸ್.ಆರ್.ಹೇಮಾ, ಶಿಕ್ಷಕರಾದ ನವ್ಯ, ಮೇರಿ ಜೋಸ್ವಿನ್, ಶಾಂತಾಮಣಿ, ಹರ್ಷಿತ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net