

ಕುಶಾಲನಗರ: ವಿದ್ಯಾರ್ಥಿಗಳು ವಿದ್ಯೆಯ ಜತೆ ವಿನಯ ಬೆಳೆಸಿಕೊಂಡಾಗ ಮಾತ್ರ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ ಎಂದು ಅನುಗ್ರಹ ಕಾಲೇಜಿನ ಟ್ರಸ್ಟಿ, ವಕೀಲ ಆರ್.ಕೆ. ನಾಗೇಂದ್ರಬಾಬು ಕಿವಿಮಾತು ಹೇಳಿದರು.
ಕುಶಾಲನಗರದ ಅನುಗ್ರಹ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿ, ಕಾಲೇಜು ದಿನಗಳಲ್ಲೇ ಭವಿಷ್ಯವನ್ನು ಸ್ಪಷ್ಟವಾಗಿ ರೂಪಿಸಿಕೊಳ್ಳುವ ಬಗ್ಗೆ ಪ್ರಯತ್ನ ಮಾಡಬೇಕು. ದೇಶ ಕಟ್ಟುವ ಕಾಯಕದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಏನೆಂಬುದನ್ನು ತಿಳಿಯಬೇಕು ಎಂದು ಸಲಹೆ ನೀಡಿದರು.
ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಟ್ರಸ್ಟ್ ಅಧ್ಯಕ್ಷ ಎಸ್.ಕೆ. ಸತೀಶ್, ಇತಿಹಾಸ ಉಪನ್ಯಾಸಕಿ ಸೀಮಾ ಮಾತನಾಡಿದರು. ಪ್ರಾಂಶುಪಾಲ ಟಿ.ವಿ. ಪಂಡರಿನಾಥ ನಾಯ್ಡು, ಉಪಪ್ರಾಂಶುಪಾಲೆ ಶ್ವೇತಾ ಇದ್ದರು.