ವಿದ್ಯೋದಯ ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿ ಆರೋಗ್ಯ ತಪಾಸಣೆ

IMG-20251016-WA0091
Published on

ತಿ.ನರಸೀಪುರ: ಗ್ರಾಮ ವಿದ್ಯೋದಯ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಕೆ.ಪಿ.ಮಹದೇವಸ್ವಾಮಿ ಅವರ 75ನೇ ಜನ್ಮದಿನಾಚರಣೆ ಪ್ರಯುಕ್ತ ಸಿಎಂಸಿ ಶಿವಾನಂದ ಶರ್ಮ ಸರ್ವೋದಯ ಪ್ರತಿಷ್ಠಾನ ಟ್ರಸ್ಟ್ ಹಾಗೂ ನೇತ್ರಧಾಮ ಕಣ್ಣಿನ ಆಸ್ಪತ್ರೆ, ಮೈಸೂರು. ಇವರ ಸಹಯೋಗದಲ್ಲಿ ವಿದ್ಯೋದಯ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ವಿದ್ಯೋದಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ನೌಕರರಿಗೆ ಏರ್ಪಡಿಸಿರುವ ಎರಡು ದಿನಗಳ ನೇತ್ರ ತಪಾಸಣೆ ಉಚಿತ ಶಿಬಿರಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಗ್ರಾಮ ವಿದ್ಯೋದಯ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಕೆ.ಪಿ.ಮಹದೇವಸ್ವಾಮಿ ಉದ್ಘಾಟಿಸಿದರು.

ನೇತ್ರಧಾಮ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಡಾ.ದಿವಾಕರ್, ಡಾ.ತೇಜಸ್, ಹೇಮಂತ್, ಪ್ರಜ್ವಲ್, ರೇವಣ್ಣ ಹಾಗೂ ಆಡಳಿತ ಸಹಾಯಕರಾದ ಎಸ್.ಶಿವನಂಜಪ್ಪ ಪ್ರಾಂಶುಪಾಲರಾದ ಎಚ್.ಎಸ್.ಮಾನಸಾ, ವಿದ್ಯೋದಯ ಬಾಲಕರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮೂಗೂರು ಕುಮಾರಸ್ವಾಮಿ, ವಿದ್ಯೋದಯ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net