ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಿ

IMG-20240712-WA0049
Published on

ತಿ.ನರಸೀಪುರ: ಸಂಸದರಾದ ಬಳಿಕ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸದಸ್ಯರಾದ ಬಿಜೆಪಿಯ ದಲಿತ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಆಯ್ಕೆ ಮಾಡಬೇಕೆಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ತೊಟ್ಟವಾಡಿ ಅನಿಲ್‌ಕುಮಾರ್ ವರಿಷ್ಠರನ್ನು ಆಗ್ರಹಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಪಕ್ಷ ನಿಷ್ಠೆಯಿಂದ ರಾಜ್ಯದ ಉದ್ದಗಲಕ್ಕೂ ಸಂಘಟನೆಗೆ ಶ್ರಮಿಸಿ ದಲಿತ ಸಮುದಾಯದ ಧ್ವನಿಯಾಗಿ ಗಮನ ಸೆಳೆದಿದ್ದಾರೆ. ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಬಳಿಕ ಬಿಜೆಪಿ ದಲಿತ ವಿರೋಧಿ ಎಂಬ ಮಾತನ್ನು ಅಳಿಸಿಹಾಕಲು ಹಗಲಿರುಳು ಶ್ರಮಿಸುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ನೀಡಿರುವ ಪಕ್ಷಕ್ಕೆ ನಿಷ್ಠೆಯಿಂದ ದುಡಿಯಬೇಕೆಂಬ ಪ್ರಾಮಾಣಿಕತೆ ಛಲವಾದಿ ನಾರಾಯಣಸ್ವಾಮಿ ಅವರಲ್ಲಿದೆ. ಹಾಗಾಗಿ ಅವರನ್ನು ಆಯ್ಕೆ ಮಾಡಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಪ್ರಸ್ತುತ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯದ ನಾಯಕ ವಿಜಯೇಂದ್ರ ಅವರಿಗೆ ನೀಡಿದ್ದು, ವಿಧಾನಸಭಾ ವಿರೊಧ ಪಕ್ಷದ ನಾಯಕ ಸ್ಥಾನವನ್ನು ಒಕ್ಕಲಿಗ ಸಮುದಾಯದ ಆರ್.ಅಶೋಕ್ ಅವರಿಗೆ ಕಲ್ಪಿಸಲಾಗಿದೆ. ಹಾಗಾಗಿ ವಿಧಾನ ಪರಿಷತ್ ನಲ್ಲಾದರೂ ದಲಿತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net