ವಿಧಾನ ಪರಿಷತ್‌ಗೆ ಅವಕಾಶ ನೀಡಿ

m. Nalwar
Published on

ಕಲಬರಗಿ: ಹಿರಿಯ ಕಾಂಗ್ರೆಸ್ ಮುಖಂಡ, ಮಾದಿಗ ಸಮಾಜದ ಶ್ಯಾಮ್ ನಾಟೀಕಾರ ಅವರಿಗೆ ಕಾಂಗ್ರೆಸ್‌ನಿAದ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ ನಾಲವಾರಕರ್ ಆಗ್ರಹಿಸಿದರು. ಕಾಂಗ್ರೆಸ್‌ನಲ್ಲಿ ನಿಷ್ಠೆ, ಪ್ರಾಮಾಣಿಕತೆಯಿಂದ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿದ್ದು, ಮಾದಿಗ ಸಮಾಜದಲ್ಲಿ ಹಿರಿಯರಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಕೆಲಸ ಮಾಡಿದ್ದಾರೆ. ಈ ಭಾಗದ ಅಭಿವೃದ್ಧಿಯ ಕಾಳಜಿ ಹೊಂದಿದ್ದು, ಅವರನ್ನು ವಿಧಾನ ಪರಿಷತ್‌ಗೆ ನಾಮ ನಿರ್ದೇಶನ ಸದಸ್ಯರನ್ನಾಗಿ ಮಾಡಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಸಚಿನ ಫರ್ತಾಬಾದ್, ದತ್ತು ಭಾಸಗಿ, ಜಯರಾಜ ಕಿರಣಗಿಕರ್, ಆನಂದ ತೆಗನೂರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net