ವಿಧಾನಪರಿಷತ್ ಚುನಾವಣೆ: ವೀಕ್ಷಕರಿಂದ ಪರಿಶೀಲನೆ

ವಿಧಾನಪರಿಷತ್ ಚುನಾವಣೆ: ವೀಕ್ಷಕರಿಂದ ಪರಿಶೀಲನೆ
Published on

ಹಾಸನ: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಚುನಾವಣೆ ವೀಕ್ಷಕ ಮತ್ತು ಅಬಕಾರಿ ಆಯುಕ್ತ ಡಾ. ಜಿ ರವಿಶಂಕರ್ ಅವರು ಬುಧುವಾರ ಜಿಲ್ಲೆಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಮತಗಟ್ಟೆ ಅಧಿಕಾರಿಗಳು ತರಬೇತಿ ಪರಿಶೀಲಿಸಿದ ಅವರು, ಯಾವುದೇ ಲೋಪ ದೋಷಗಳಿಲ್ಲದೆ ಕಟ್ಟುನಿಟ್ಟಾಗಿ ಚುನಾವಣಾ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ವಿಧಾನಪರಿಷತ್ ಚುನಾವಣೆಯು ಮತದಾನ ಮತ್ತು ಮತ ಎಣಿಕೆ ವಿಧಾನ ಸಾಮಾನ್ಯ ಚುನಾವಣೆಗಿಂತ ವಿಭಿನ್ನವಾಗಿದೆ. ಈ ಬಗ್ಗೆ ಸಮಗ್ರವಾಗಿ ತಿಳಿದುಕೊಂಡು ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಅವರು ಮಾತನಾಡಿ, ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಹಾಸನ ಜಿಲ್ಲೆಯಲ್ಲಿ 10 ಮತಗಟ್ಟೆಗಳು ಇವೆ. ಎಲ್ಲ ಮತಗಟ್ಟೆಗಳಲ್ಲಿಯೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಟಿ ಶಾಂತಲಾ ಉಪಸ್ಥಿತರಿದ್ದರು. ನಂತರ ಚುನಾವಣಾ ವೀಕ್ಷಕರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net