ವಿನಯ ಕುಲಕರ್ಣಿ, ಇಂಡಿ ಬಂಧನ ವಿಸ್ತರಣೆ

Vinay Kulkarni 345
Published on

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಅವರ ಸೋದರ ಮಾವ ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ಅವಧಿಯನ್ನು ಜ. 8ರವರೆಗೆ ವಿಸ್ತರಣೆ ಮಾಡಿ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.

ವಿನಯ ಕುಲಕರ್ಣಿ ಹಾಗೂ ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ಅವಧಿ ಅಂತ್ಯಗೊಂಡಿತ್ತು. ಹೀಗಾಗಿ ಸೋಮವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಜ. 8ರವರೆಗೆ ಇಬ್ಬರಿಗೂ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿತು.

ಜಿ.ಪಂ. ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿರುವ ಕುಲಕರ್ಣಿ ಸದ್ಯ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ. ಇತ್ತ ಅವರ ಪರ ವಕೀಲರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಜ. 6ರಂದು ಅರ್ಜಿ ವಿಚಾರಣೆಗೆ ಬರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net