ವಿನಯ ಕುಲಕರ್ಣಿ ಮನೆಗೆ ಅನಾಮಧೇಯ ಪತ್ರಗಳ ಹಾವಳಿ

1111111111
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಮನೆಗೆ ಮತ್ತೆ ಅನಾಮಧೇಯ ಬೆದರಿಕೆ ಪತ್ರಗಳ ಹಾವಳಿ ಶುರುವಾಗಿದೆ. ಕೆಲ ದಿನಗಳ ಹಿಂದೆ ಪತ್ರಗಳು ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲು ಆಗ್ರಹಿಸಿ ಶಿವಲೀಲಾ ಕುಲಕರ್ಣಿ ಅವರು ಉಪನಗರ ಠಾಣೆಗೆ ಶುಕ್ರವಾರ ದೂರು ನೀಡಿದರು.
ಕಳೆದ ೨೦೧೮ರ ವಿಧಾನಸಭೆ ಹಾಗೂ ೨೦೧೪೯ರ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಇದೇರೀತಿಯ ಅನಾಮಧೇಯ ಪತ್ರಗಳು ಬಂದಿದ್ದವು. ಆಗ ತನಿಖೆಗೆ ಆಗ್ರಹಿಸಿ ದೂರು ನೀಡಿದ್ದರೂ ಕ್ರಮ ಕೈಗೊಂಡಿರಲಿಲ್ಲ. ಈಗ ವಿಧಾನಸಭೆ ಚುನಾವಣೆ ಹತ್ತಿರ ಬಂದ ಸಂದರ್ಭದಲ್ಲಿ ಮನೆಗೆ ಅನಾಮಧೇಯ ಪತ್ರಗಳು ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ಪತ್ರ ಬರೆಯುವವರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಬೇಕು ಎಂದು ಶಿವಲೀಲಾ ಕುಲಕರ್ಣಿ ದೂರಿನಲ್ಲಿ ಆಗ್ರಹಿಸಿದ್ದಾರೆ.
ಈ ವೇಳೆ ಶಿವಲೀಲಾ ಕುಲಕರ್ಣಿ ಮಾತನಾಡಿ, ಅನಾಮಧೇಯ ಪತ್ರಗಳಿಂದ ಕುಟುಂಬಕ್ಕೆ ತೊಂದರೆಯಾಗುತ್ತಿದೆ. ಬಿಜೆಪಿ ಮುಖಂಡರು ಪಿತೂರಿ ನಡೆಸಿದ್ದಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ. ಮುರುಘಾಮಠದ ಭಕ್ತೆಯಾಗಿದ್ದ ವಿಜಯಲಕ್ಷಿ÷್ಮÃ ಎಂಬುವರ ಹೆಸರು ನಮೂದಿಸಲಾಗಿದೆ. ಆ ಮಹಿಳೆ ಈ ಹಿಂದೆಯೂ ಕರಪತ್ರಗಳನ್ನು ಹಂಚುತ್ತಿದ್ದಾಗ ಕಾಂಗ್ರೆಸ್ ಬೆಂಬಲಿಗರ ಕೈಗೆ ಸಿಕ್ಕಿ ಬಿದ್ದಿದ್ದಳು. ಅವರ ಹೆಸರನ್ನು ದುರುಪಯೋಗ ಮಾಡಿಕೊಂಡು ಬೇರೆಯವರು ಬೆದರಿಕೆ ಪತ್ರ ಬರೆದು ಕುಟುಂಬದ ನೆಮ್ಮದಿ ಹಾಳು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net