ವಿನಯ ಸೋಮಯ್ಯ ಆತ್ಮಹತ್ಯೆ ಘಟನೆ ಖಂಡಿಸಿ ಪ್ರತಿಭಟನೆ

bkt-6-6
ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ಸಂಜೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on

ಬಾಗಲಕೋಟೆ: ಬಿಜೆಪಿ ಕಾರ್ಯರ್ಕರು ಆತ್ಮಹತ್ಯೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಬೆದರಿಕೆ ಹಾಗೂ ಒತ್ತಡ ಹೇರಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ಬೆಲೆ ಏರಿಕೆ, ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ ಖಂಡಿಸಿ ಬಿಜೆಪಿ ಪಕ್ಷದ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಆಡಳತಕ್ಕೆ ಬಂದ ಬಳಿಕ ಬಿಜೆಪಿ ಕಾರ್ಯಕರ್ತರ ಮೇಲೆ ಎ-Àಐಆರ್ ದಾಖಲಿಸಿ ಕಿರುಕುಳ ನೀಡುವುದರ ಮೂಲಕ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿದ್ದಾರೆ. ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ ಸೋಮಯ್ಯ ಅವರ ಆತ್ಮಹತ್ಯೆ ವಿಚಾರ ಗೃಹ ಸಚಿವ ಜಿ.ಪರಮೇಶ್ವರ ಅವರು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮಗೊಳ್ಳಬೇಕು. ಕಾಂಗ್ರೆಸ್ ಸರ್ಕಾರದ ದುರಾಡಳಿತ, ಜನ ಸಾಮಾನ್ಯರನ್ನು ಶೋಷಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಜಿ.ಎನ್.ಪಾಟೀಲ, ಡಾ.ಎಂ.ಎಸ್.ದಡ್ಡೆನ್ನವರ, ನಗರಸಭೆ ಅಧ್ಯಕ್ಷೆ ಸವಿತಾ ಲಂಕೆನ್ನವರ, ಉಪಾಧ್ಯಕ್ಷೆ ಶೋಭಾ ರಾವ, ಸದಸ್ಯೆ ಸರಸ್ವತಿ ಕುರಬರ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಶಿವಾನಂದ ಟವಳಿ, ಮುತ್ತಣ್ಣ ಬೆಣ್ಣೂರ, ಸತ್ಯನಾರಾಯಣ ಹೆಮಾದ್ರಿ, ನಾಗರಾಜ ನಾರಾಯಣಕರ, ಯಲ್ಲಪ್ಪ ನಾರಾಯಣಿ, ಉಮೇಶ ಹಂಚಿನಾಳ, ಶ್ರೀಧರ ನಾಗರಬೆಟ್ಟ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net