ವಿಪಕ್ಷಗಳ ಟೀಕೆಗೆ ಶಕ್ತಿ ಯೋಜನೆ ಉತ್ತರ

15sgr2
ಸಾಗರದಲ್ಲಿ ಆಯೋಜಿಸಿದ್ದ ಶಕ್ತಿ ಯೋಜನೆ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪ್ರಯಾಣಿಕರಿಗೆ ಗೋಪಾಲಕೃಷ್ಣ ಬೇಳೂರು ಟಿಕೆಟ್ ವಿತರಿಸಿದರು. ಬಿ.ಆರ್.ಜಯಂತ್, ಮಕ್ಬೂಲ್ ಅಹ್ಮದ್, ಅಂಬಿಕಾ, ಸುರೇಶಬಾಬು ಇತರರಿದ್ದರು.
Published on

ಸಾಗರ: ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಮಾಡಿದ ಬಿಜೆಪಿಗೆ ರಾಜ್ಯದ ಮಹಿಳೆಯರು ಶಕ್ತಿ ಯೋಜನೆ ಮೂಲಕ ಸರಿಯಾದ ಉತ್ತರ ನೀಡಿದ್ದಾರೆ. 500 ಕೋಟಿ ಮಹಿಳೆಯರು ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಗ್ಯಾರಂಟಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಮಹಿಳೆಯರು ಪ್ರಯಾಣಿಸಿರುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚಾಲಕ, ನಿರ್ವಾಹಕರನ್ನು ಸನ್ಮಾನಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಕಾರಕ್ಕೆ ಬಂದು ಎರಡು ವರ್ಷ ಕಳೆದಿದೆ. ಗ್ಯಾರಂಟಿ ಯೋಜನೆಯಡಿ ರಾಜ್ಯದ ಎಲ್ಲ ವರ್ಗದ ಜನರಿಗೂ ಒಂದಿಲ್ಲೊಂದು ಸೌಲಭ್ಯ ಸಿಗುತ್ತಿದೆ. ಐದು ಗ್ಯಾರಂಟಿಗಳನ್ನು ಬಿಜೆಪಿ ನಾಯಕರು ಟೀಕಿಸಿದ್ದರು. ಅಭಿವೃದ್ಧಿ ಸಾಧ್ಯವಿಲ್ಲ ಎಂದು ಬಿಂಬಿಸಿದ್ದರು. ಆದರೆ ಅಭಿವೃದ್ಧಿಗೆ ಹಣದ ಕೊರತೆಯಾಗಿಲ್ಲ ಎಂದರು.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಗ್ಯಾರಂಟಿ ಯೋಜನೆ ವಿಶೇಷ ಕಾರ್ಯಕ್ರಮ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು ಯೋಜನೆ ಜಾರಿಗೆ ವಿಶೇಷ ಒತ್ತು ನೀಡಿದ್ದಾರೆ. ಗ್ಯಾರಂಟಿ ಯೋಜನೆ ಮೂಲಕ ಸರ್ಕಾರದ ಸಂಪನ್ಮೂಲ ಸಾಮಾನ್ಯ ಜನರಿಗೂ ತಲುಪುವಂತೆ ಮಾಡಿದೆ. ನಮ್ಮ ಸರ್ಕಾರ ಎಲ್ಲ ಸಮುದಾಯಗಳನ್ನು ಅತ್ಯಂತ ವ್ಯವಸ್ಥಿತವಾಗಿ ಕೊಂಡೊಯ್ಯುತ್ತಿದ. ಜನಕಲ್ಯಾಣದ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸುತ್ತಿದೆ ಎಂದು ತಿಳಿಸಿದರು.

ಪ್ರಮುಖರಾದ ಮಕ್ಬೂಲ್ ಅಹ್ಮದ್, ಅಂಬಿಕಾ, ಸುರೇಶಬಾಬು, ಕಲಸೆ ಚಂದ್ರಪ್ಪ, ಸಾವಿತ್ರಮ್ಮ, ನಾಗರಾಜ್, ಮಹಾಬಲೇಶ್ವರ ಕುಗ್ವೆ, ಲೋಕನಾಥ್, ಅನ್ವರ್ ಬಾಷಾ, ಮಹಾಬಲ ಕೌತಿ, ಭವ್ಯಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net