

ನಾಪೋಕ್ಲು: ಬಸವನಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಹೊದವಾಡ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದು, ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಮುಝಮಿಲ್, ಹಂಸಾ, ಮಿಶಾಬ್, ಶಾಹಿಲ್, ಅಬ್ದುಲ್ ಖಾಲಿದ್, ಮಶೂದ್, ಫಾಸಿಲ್ ಹಾಗೂ ಮೊಹಮದ್ ಶಫೀಕ್ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಿ.ಅನಿಲ್ ತರಬೇತಿ ನೀಡಿದ್ದಾರೆ ಎಂದು ಮುಖ್ಯ ಶಿಕ್ಷಕ ಅಶೋಕ್ ತಿಳಿಸಿದ್ದಾರೆ.